ರಾವಲ್ಪಿಂಡಿಯಲ್ಲಿ ಇಂದು ಬೃಹತ್ ಸಭೆ ಆಯೋಜಿಸಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ಬೇನಜೀರ್ ಭುಟ್ಟೋ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.
ಪಾಕಿಸ್ತಾನದಲ್ಲಿ ತುರ್ತು ಪರಿಸ್ಥಿತಿ ಹೇರಿದ ಅಧ್ಯಕ್ಷ ಪರ್ವೇಜ್ ಮುಷರಫ್ ವಿರುದ್ಧ ಪ್ರತಿಭಟನಾರ್ಥವಾಗಿ ಬೇನಜೀರ್ ಘೋಷಿಸಿದ್ದ ಸಮಾವೇಶದ ಮೇಲೆ ನಿಷೇಧ ವಿಧಿಸಲಾಗಿತ್ತು. ಆದರೂ ತಾನು ರಾಲಿ ನಡೆಸಿಯೇ ಸಿದ್ಧ ಎಂದು ಆಕೆ ಘೋಷಿಸಿ ಮುಷರಫ್ ಆಡಳಿತದ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.
ಫೆಬ್ರವರಿ ತಿಂಗಳಲ್ಲಿ ಚುನಾವಣೆ ನಡೆಸುವ ಮುಷರಫ್ ಭರವಸೆ ಮೇಲೆ ತಮಗೆ ವಿಶ್ವಾಸವಿಲ್ಲ ಎಂದು ಭುಟ್ಟೋ ಹೇಳಿದ್ದಾರೆ.
ಅವರ ಪಾಕಿಸ್ತಾನ ಪೀಪಲ್ಸ್ ಪಾರ್ಟಿಯ ಸಾವಿರಾರು ಮಂದಿ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಶುಕ್ರವಾರದ ಯೋಜಿತ ಸಮಾವೇಶದ ಸಂದರ್ಭದಲ್ಲಿ ಆತ್ಮಹತ್ಯಾ ಬಾಂಬ್ ದಾಳಿಯ ಕುರಿತು ಎಚ್ಚರಿಕೆ ನೀಡಲಾಗಿತ್ತು.
|