ಆತ್ಮಹತ್ಯಾ ದಳದ ಸದಸ್ಯ ಸೇನಾ ವಾಹನದ ಮೇಲೆ ದಾಳಿ ಮಾಡಿದ ಹಿನ್ನೆಲೆಯಲ್ಲಿ ಅನೇಕ ಸೈನಿಕರಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಅಮೆರಿಕದ ರಕ್ಷಣಾ ಕಾರ್ಯದರ್ಶಿ ರಾಬರ್ಟ್ ಗೇಟ್ಸ್ ದೇಶಕ್ಕೆ ಭೇಟಿ ನೀಡಿದ ನಂತರ ಇದು ಎರಡನೇಯ ಘಟನೆಯಾಗಿದೆ ಎಂದು ಅಫಘಾನಿಸ್ಥಾನದ ಅಧಿಕಾರಿಗಳು ತಿಳಿಸಿದ್ದಾರೆ.
ಆತ್ಮಹತ್ಯಾ ದಳದ ಸದಸ್ಯ ಸೇನಾ ವಾಹನದ ಮೇಲೆ ದಾಳಿ ಮಾಡಿದ ವರದಿಗಳು ಲಭ್ಯವಾಗಿದ್ದರೂ ಇಲ್ಲಿಯವರೆಗೆ ಹಾನಿಯಾದ ಬಗ್ಗೆ ಯಾವುದೇ ವರದಿಗಳು ಲಭ್ಯವಾಗಿಲ್ಲವೆಂದು ಸಚಿವಾಲಯದ ವಕ್ತಾರ ಜನರಲ್ ಮೊಹಮ್ಮದ್ ಝಹೀರ್ ಅಜ್ಮಿ ತಿಳಿಸಿದ್ದಾರೆ.
ನಗರದಲ್ಲಿ ಆತ್ಮಹತ್ಯಾ ದಳದ ಸದಸ್ಯ ಸೇನಾ ವಾಹನದ ಮೇಲೆ ದಾಳಿ ಮಾಡಿರುವುದು ಖಚಿತವಾಗಿದ್ದು, ಇಲಾಖೆಯ ಸಿಬ್ಬಂದಿ ಗಾಯಾಳುಗಳನ್ನು ಸ್ಥಳಾಂತರಿಸಿ ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತುರ್ತುಸೇವಾ ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.
ಅಮೆರಿಕದ ರಕ್ಷಣಾ ಕಾರ್ಯದರ್ಶಿ ರಾಬರ್ಟ್ ಗೇಟ್ಸ್ ದೇಶಕ್ಕೆ ಭೇಟಿ ಅಧ್ಯಕ್ಷ ಹಮೀದ್ ಕರ್ಝಾಯಿ, ಹಾಗೂ ಸೇನಾಪಡೆಗಳ ಕಮಾಂಡರ್ ಅವರೊಂದಿಗೆ ಮಾತುಕತೆ ನಡೆಸುತ್ತಿರುವ ಸಂದರ್ಭದಲ್ಲಿ ಈ ಘಟನೆ ವರದಿಯಾಗಿದೆ.
ಆತ್ಮಹತ್ಯಾ ದಳ ನ್ಯಾಟೋದ ಅಂತಾರಾಷ್ಟ್ರೀಯ ಭದ್ರತಾ ಸಹಕಾರ ದಳವನ್ನು ಗುರಿಯಾಗಿಸಿ ದಾಳಿ ಮಾಡಿರುವುದು ವಿಫಲವಾಗಿ 22 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
|