ದಕ್ಷಿಣ ಇರಾಕ್‌ನ ಬಾಸ್ರಾದಲ್ಲಿ ಶಿಯಾಗಳು ವಾಸವಾಗಿರುವ ಪ್ರದೇಶದಲ್ಲಿ ಕಾರ್‌ಬಾಂಬ್ ಸ್ಪೋಟಗೊಂಡು 60 ಮಂದಿ ಮೃತರಾಗಿದ್ದು,ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಮರಾ ನಗರದಲ್ಲಿ ಮಾರುಕಟ್ಟೆಯ ಜನನಿಬಿಡ ಪ್ರದೇಶದಲ್ಲಿ ಕಾರ್‌ಪಾರ್ಕ್‌ನಲ್ಲಿ ಮೂರು ಬಾಂಬ್‌ಗಳು ಸರಣಿ ಸ್ಪೋಟಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಜನರು ಬಲಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಇರಾಕ್ ಪ್ರದೇಶದಲ್ಲಿ ಉಗ್ರರು ಹಾಗೂ ಅಮೆರಿಕ ನೇತ್ರತ್ವದ ಪಡೆಗಳ ನಡುವೆ ನಡೆದ ಘರ್ಷಣೆಗಳಲ್ಲಿ ಹೆಚ್ಚಿನ ಸಾವುನೋವುಗಳು ಉಂಟಾಗಿವೆ ಎಂದು ಹೇಳಲಾಗಿದೆ.
ಕಳೆದ ಕೆಲ ತಿಂಗಳುಗಳ ಹಿಂದೆ ಪ್ರಾಂತ್ಯಗಳ ರಾಜ್ಯಪಾಲರನ್ನು ಉಗ್ರರು ಹತ್ಯೆ ಮಾಡಿದ್ದಲ್ಲದೇ ಹಿರಿಯ ಪೊಲೀಸ್ ಅಧಿಕಾರಿಯನ್ನು ಹತ್ಯಗೀಡುಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
|