ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ಅಂತಾರಾಷ್ಟ್ರೀಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಭಯೋತ್ಪಾದಕರ ವಿರುದ್ದ ಸಮರ-ಮುಷರಫ್
ಪಾಕಿಸ್ತಾನದ ಮಾಜಿ ಪ್ರಧಾನಿ ಬೇನ್‌ಜಿರ್ ಭುಟ್ಟೋ ಅವರ ಹತ್ಯೆಯ ಹಿನ್ನೆಲೆಯಲ್ಲಿ ಮೂರು ದಿನಗಳ ಶೋಕಾಚರಣೆಗೆ ಪಾಕ್ ಅಧ್ಯಕ್ಷ ಪರ್ವೇಜ್ ಮುಷರಫ್ ಘೋಷಿಸಿದ್ದಾರೆ. ದೇಶದಲ್ಲಿ ಶಾಂತಿಯನ್ನು ಕಾಪಾಡಿ ತಾಳ್ಮೆಯಿಂದ ಇರಬೇಕೆಂದು ರಾಷ್ಟ್ರಾಧ್ಯಕ್ಷ ಮುಷರಫ್ ಜನತೆಗೆ ಕರೆ ನೀಡಿದ್ದಾರೆ.

ಪಾಕಿಸ್ತಾನ ಭಯೋತ್ಪಾದಕರಿಂದ ಬೆದರಿಕೆಯನ್ನು ಎದುರಿಸುತ್ತಿದ್ದು, ದೇಶದ ಅಭಿವೃದ್ಧಿಗೆ ಅಡ್ಡಿಯಾಗಿದ್ದಾರೆ ಎಂದು ನಾನು ಸದಾ ಹೇಳುತ್ತಿದ್ದೇನೆ. ಇಂತಹ ನೋವಿನ ಸಂದರ್ಭದಲ್ಲಿ ಭಯೋತ್ಪಾದನೆಯ ವಿರುದ್ದ ಹೋರಾಡಲು ಜನತೆ ನಮಗೆ ಸಹಕಾರ ನೀಡಬೇಕು. ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವವರೆಗೂ ವಿಶ್ರಾಂತಿ ಪಡೆಯುವುದಿಲ್ಲವೆಂದು ಹೇಳಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ಬೇನ್‌ಜಿರ್‌ ಭುಟ್ಟೋ ರಾವಲ್ಪಿಂಡಿಯ ಲಿಯಾಖತ್ ಬಾಘ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾಗಿರುವುದು ದುರಂತ. ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಷರಫ್ ತಿಳಿಸಿದ್ದಾರೆ.

ಭಯೋತ್ಪಾದಕರ ಆತ್ಮಹತ್ಯಾ ದಾಳಿಯಲ್ಲಿ ಬಲಿಯಾದವರಿಗೆ ದೇವರು ಶಾಂತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಬೇನ್‌ಜಿರ್ ಪತಿ ಆಸಿಫ್ ಅಲಿ ಜರ್ದಾರಿ ಅವರ ಜೊತೆ ನೇರ ಸಂಪರ್ಕದಲ್ಲಿದ್ದೇನೆ ಎಂದು ಮುಷರಫ್ ದೂರದರ್ಶನದಲ್ಲಿ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಮತ್ತಷ್ಟು
ಮುಷರಫ್ ಹೊಣೆ: ಚುನಾವಣೆಗೆ ಪಿಎಂಎಲ್ ಬಹಿಷ್ಕಾರ
ಭುಟ್ಟೋ ಕೊಂದದ್ದು ನಾವು: ಅಲ್ ಖಾಯಿದಾ
ಬೇನಜೀರ್ ಭುಟ್ಟೊ ನಡೆದು ಬಂದ ದಾರಿ
ಸೌಂದರ್ಯ, ಡಿಸೈನರ್ ಕನ್ನಡಕಕ್ಕೆ ಹೆಸರಾಗಿದ್ದ ಭುಟ್ಟೋ
ಉಗ್ರರ ಬೆದರಿಕೆ: ಪಾಕ್‌ನಲ್ಲಿ ತೀವ್ರ ಕಟ್ಟೆಚ್ಚರ
ಮುಷ್-ಕರ್ಜಾಯಿ ಮಹತ್ವದ ಮಾತುಕತೆ