ಚುನಾವಣೆಯಲ್ಲಿ ಅಡಳಿತರೂಢ ಪಕ್ಷ ಹೀನಾಯವಾಗಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಸಚಿವ ಸಂಪುಟವನ್ನು ಪುನರ್‌ರಚನೆ ಮಾಡಿ ಆದೇಶ ಹೊರಡಿಸಿದ್ದಾರೆ.
ಅಡಳಿತ ಪಕ್ಷದ ಹಿರಿಯ ಮುಖಂಡ ಹಾಗೂ ಕಳೆದ 30 ವರ್ಷಗಳಿಂದ ನಿರಂತರವಾಗಿ ಸಚಿವ ಸ್ಥಾನವನ್ನು ಅಲಂಕರಿಸಿದ್ದ ವಾಣಿಜ್ಯ ಸಚಿವ ರಫಿಧಾ ಅಜೀಜ್ ಅವರನ್ನು ಸಂಪುಟದಿಂದ ಕೈಬಿಟ್ಟಿರುವುದು, ಪ್ರಧಾನಿ ಅಬ್ದುಲ್ಲಾ ಅಹಮದ್ ಬದವೈ ಅವರ ಮುಂದಿನ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಸಚಿವ ಸಂಪುಟದ ಅರ್ಧದಷ್ಟು ಸಚಿವರು ಹೊಸಬರಾಗಿದ್ದು ಉತ್ತಮವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಪ್ರಧಾನಿ ಹೇಳಿದ್ದಾರೆ.
ಕಳೆದ 30 ವರ್ಷಗಳಿಂದ ನಿರಂತರವಾಗಿ ಸಚಿವ ಸ್ಥಾನವನ್ನು ಅಲಂಕರಿಸಿದ್ದ ವಾಣಿಜ್ಯ ಸಚಿವ ರಫಿಧಾ ಅಜೀಜ್ ಅವರನ್ನು ಸಂಪುಟದಿಂದ ಕೈಬಿಟ್ಟಿರುವ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ನಾನು ಈ ಕುರಿತು ಚರ್ಚಿಸಲು ಇಷ್ಟಪಡುವುದಿಲ್ಲ ಎಂದು ಬದವೈ ತಿಳಿಸಿದ್ದಾರೆ.
|