ತುರ್ಕಿಶ್ ಭಯೋತ್ಪಾದನಾ ನಿಗ್ರಹ ದಳದ ಪೊಲೀಸರು 45 ಮಂದು ಅಲ್-ಖೈದಾ ಉಗ್ರರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇಸ್ತಾನ್‌ಬುಲ್‌ನ ಎಂಟು ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ ಅನಾಟೋಲಿಯಾ ಜಿಲ್ಲೆಯಲ್ಲಿ ಭಯೋತ್ಪಾದನಾ ದಾಳಿ ನಡೆಸಲು ಯತ್ನಿಸುತ್ತಿದ್ದ 45 ಮಂದಿ ಉಗ್ರರನ್ನು ಬಂಧಿಸಲಾಗಿದ್ದು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಾರ್ ಬಾಂಬ್ ದಾಳಿ ನಡೆಸಲು ಯೋಜನೆಯನ್ನು ರೂಪಿಸುತ್ತಿದ್ದ ಉಗ್ರರನ್ನು ಪೊಲೀಸರು ಬಂಧಿಸಿ ನ್ಯಾಯಾಂಗವಶಕ್ಕೆ ಒಪ್ಪಿಸಲಾಗಿದ್ದು,ನ್ಯಾಯಾಲಯ ಆರೋಪಿಗಳ ಬಗ್ಗೆ ತೀರ್ಮಾನಿಸಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಉಗ್ರರ ವಿರುದ್ದ ನಡೆದ ಪೊಲೀಸ್ ಕಾರ್ಯಾಚರಣೆ ಘರ್ಷಣೆಯಲ್ಲಿ ನಾಲ್ಕು ಮಂದಿ ಉಗ್ರರು, ಒಬ್ಬ ಪೊಲೀಸ್ ಪೇದೆ ಹತನಾಗಿದ್ದು 17 ಮಂದಿಯನ್ನು ಪೊಲೀಸರು ಬಂಧಿಸಿದ್ದರು.
|