ಆಫ್ಘನಿಸ್ತಾನದ ಅಧ್ಯಕ್ಷ ಹಮೀದ್ ಕರ್ಜಾಯಿ ಅವರ ಮೇಲೆ ಭಾನುವಾರ ಉಗ್ರರು ನಡೆಸಿದ ಗುಂಡಿನ ದಾಳಿಯನ್ನು ಕಠಿಣ ಶಬ್ಧಗಳಲ್ಲಿ ಖಂಡಿಸಿರುವ ಸಂಯುಕ್ತ ರಾಷ್ಟ್ರ ಸಂಘದ ಮಹಾ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಅವರು ಯುದ್ಧಗ್ರಸ್ತ ಆಫ್ಘಾನಿಸ್ತಾನಕ್ಕೆ ಎಲ್ಲ ನೆರವು ನೀಡುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಅವರು ಕರೆ ನೀಡಿದ್ದಾರೆ.
ಆಫ್ಘನ್ ಅಧ್ಯಕ್ಷ ಹಮೀದ್ ಕರ್ಜಾಯಿ ಅವರ ಮೇಲೆ ನಡೆದ ಗುಂಡಿನ ದಾಳಿ ಅಕ್ಷಮ್ಯವಾದುದು. ರಾಷ್ಟ್ರದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಮಾಡಿರುವ ಹಲ್ಲೆಗೆ ಕ್ಷಮೆ ಇಲ್ಲ. ಈಗಾಗಲೇ ಯುದ್ಧದಿಂದ ಸಾಕಷ್ಟು ಹಾನಿಗೊಳಗಾಗಿರುವ ಆಫ್ಘಾನಿಸ್ತಾನದ ಪುನರುತ್ಧಾನದಲ್ಲಿ ಸಂಯುಕ್ತ ರಾಷ್ಟ್ರ ಸಂಘವು ಎಲ್ಲ ರೀತಿಯ ಸಹಾಯವನ್ನು ಮಾಡಲಿದೆ. ಮೂಲಭೂತವಾಗಿ ಸಂಯುಕ್ತ ರಾಷ್ಟ್ರ ಸಂಘವು ಸಮಾಜದಲ್ಲಿ ಕೆಳವರ್ಗದಲ್ಲಿರುವ ವ್ಯಕ್ತಿ ಮತ್ತು ಬಡತನದಿಂದ ನರಳುತ್ತಿರುವ ರಾಷ್ಟ್ರಗಳಿಗೆ ಸಂಯುಕ್ತ ರಾಷ್ಟ್ರ ಇತರ ಸದಸ್ಯ ರಾಷ್ಟ್ರಗಳ ಸಹಯೋಗದೊಂದಿಗೆ ನೆರವು ನೀಡುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.
ಹಮೀದ್ ಕರ್ಜಾಯಿ ಅವರ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಚುರುಕಾಗಿ ಪ್ರತಿಕ್ರಿಯಿಸಿ ಉಗ್ರರ ದಾಳಿಯನ್ನು ಯಶಸ್ವಿಯಾಗಿ ಮಟ್ಟ ಹಾಕಿದ ಆಫ್ಘನ್ ಭದ್ರತಾ ಪಡೆಗಳ ಕಾರ್ಯವೈಖರಿಯನ್ನು ಶ್ಲಾಘಿಸಿ ಆಗಬಹುದಾದ ಭಾರೀ ಅನಾಹುತವನ್ನು ತಡೆಯುವಲ್ಲಿ ಸಫಲವಾಗಿವೆ ಎಂದು ಅವರು ಹೇಳಿದ್ದಾರೆ.
|