ಚೀನಾದ ಆಗ್ನೇಯ ಭಾಗದಲ್ಲಿರುವ ವಾಗುರ್ ಪ್ರಾಂತ್ಯದ ಕ್ಸಿಜಿಯಾಂಗ್ ಬಳಿ ಬಸ್ ಉರುಳಿಬಿದ್ದು ಮಕ್ಕಳು ಸೇರಿದಂತೆ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಟುಕ್ಸ್ ಸಿಟಿ ಹಾಗೂ ಅಕ್ವಿ ಕೌಂಟಿ ಹೆದ್ದಾರಿಯಲ್ಲಿ ಮಧ್ಯಾಹ್ನ 2ಗಂಟೆ ಸುಮಾರಿಗೆ ಬಸ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಅಪಘಾತ ಸಂಭವಿಸಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ವಿದ್ಯಾರ್ಥಿಗಳು ಹೈಸ್ಕೂಲ್ ಪ್ರವೇಶ ಪರೀಕ್ಷೆಯಲ್ಲಿ ಪಾಸಾದ ನಂತರ ಹೆತ್ತವರೊಂದಿಗೆ ಆರೋಗ್ಯ ತಪಾಸಣೆಗಾಗಿ ತೆರಳುತ್ತಿರುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತರಾದವರಲ್ಲಿ ಹೆಚ್ಚಿನವರು ವಿದ್ಯಾರ್ಥಿಗಳಾಗಿದ್ದಾರೆ
ಸ್ಥಳಿಯ ಅಧಿಕಾರಿಗಳು ಹಾಗೂ ನಿವಾಸಿಗಳು ಪರಿಹಾರ ಕಾರ್ಯಗಳಲ್ಲಿ ತೊಡಗಿದ್ದು, ಬಸ್ ಅಪಘಾತ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
|