ಟ್ರೈಪೊಲಿಗೆ ಉತ್ತರ ಭಾಗದಲ್ಲಿರುವ ನಗರಕ್ಕೆ ತೆರಳುತ್ತಿರುವ ಸೇನಾವಾಹನ ಸಾಗುತ್ತಿರುವ ಸಂದರ್ಭದಲ್ಲಿ ನೆಲಬಾಂಬ್ ಸ್ಫೋಟಿಸಿ 18 ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಭದ್ರತಾಪಡೆಗಳ ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಾದವರಲ್ಲಿ 10 ಕರ್ತವ್ಯದಲ್ಲಿ ನಿರತರಾಗಿದ್ದ ಸೈನಿಕರಾಗಿದ್ದು, ಜನನಿಬಿಡ ರಸ್ತೆಯಲ್ಲಿ ಸೇನಾವಾಹನ ಸಾಗುತ್ತಿರುವಾಗ ರಸ್ತೆಬದಿಯ ಬಾಂಬ್ ಸ್ಫೋಟಿಸಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ಪ್ಯಾಲಿಸ್ತೇನಿ ನಿರಾಶ್ರಿತರ ಶಿಬಿರಗಳಲ್ಲಿ ಸೇನಾ ಮತ್ತು ಅಲ್-ಕೈದಾ ಉಗ್ರರ ನಡುವೆ ನಡೆದ ಘರ್ಷಣೆಯ ಹಿನ್ನಲೆಯಲ್ಲಿ ಸೇಡು ತೀರಿಸಿಕೊಳ್ಳಲು ಅಲ್‌ಕೈದಾ ಬೆಂಬಲಿತ ಇಸ್ಲಾಮಿಕ್ ಉಗ್ರರು ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.
|