ನೇಪಾಳದ ಎರಡು ಪ್ರಮುಖ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರ ಗುಂಡುದಾಳಿಯಿಂದಾಗಿ ಅನೇಕ ಮಂದಿ ಗಾಯಗೊಂಡಿದ್ದು, ಪೂರ್ವ ನೇಪಾಳದಲ್ಲಿ ಕರ್ಫ್ಯೂ ವಿಧಿಸಲಾಗಿದೆ.
ಸಿಪಿಎನ್-ಮಾವೋವಾದಿ ಪಕ್ಷದ ಯಂಗ್ ಕಮ್ಯುನಿಸ್ಟ್ ಲೀಗ್ ಮತ್ತು ಸಿಪಿಎನ್-ಯುಎಂಎಲ್‌ನ ಯೂತ್ ಫೋರ್ಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಗುಂಡುದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಎರಡೂ ಗುಂಪುಗಳ ಸುಮಾರು ಡಜನ್‌ಗಟ್ಟಲೆ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ, ಪ್ರದೇಶದಲ್ಲಿ ಕರ್ಫ್ಯೂ ವಿಧಿಸಲಾಗಿದೆ.
|