ಜಪಾನ್‌ನ ಜನಪ್ರಿಯರಹಿತ ಪ್ರಧಾನಿ ಯಾಸುವೋ ಫುಕುಡಾ ಅವರು ಸೋಮವಾರದಂದು ರಾಜೀನಾಮೆಯನ್ನು ಘೋಷಿಸಿದ್ದಾರೆ.
ಕೆಲವೇ ತಿಂಗಳ ಹಿಂದಷ್ಟೇ ಪ್ರಧಾನಿ ಗದ್ದುಗೆಯನ್ನು ಅಲಂಕರಿಸಿದ್ದ ಫುಕುಡಾ ಇದೀಗ ತಮ್ಮ ಸ್ಥಾನವನ್ನು ತ್ಯಜಿಸುತ್ತಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ.
ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಫುಕುಡಾ,ರಾಜಕೀಯ ಒತ್ತಡವನ್ನು ನಿವಾರಿಸಿಕೊಳ್ಳುವ ದೃಷ್ಟಿಕೋನದಿಂದ ಪ್ರಧಾನಿ ಹುದ್ದೆಯಿಂದ ಕೆಳಗಿಳಿದಿರುವುದಾಗಿ ಸ್ಪಷ್ಟಪಡಿಸಿದರು.
ಅಲ್ಲದೇ ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಕೋನದಿಂದಾಗಿ ನಾನು ನನ್ನ ನಿರ್ಧಾರವನ್ನು ಕೈಗೊಂಡಿರುವುದಾಗಿ 72ರ ಹರೆಯದ ಫುಕುಡಾ ತಿಳಿಸಿದರು.
|