ಢಾಕಾ:ಭ್ರಷ್ಟಾಚಾರ ಆರೋಪದ ಮೇಲೆ ಬಂಧಿತರಾಗಿದ್ದ ಬಾಂಗ್ಲಾದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರು ಮುಂದಿನ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇರುವುದಾಗಿ ಜಿಯಾ ವಕೀಲ ಶುಕ್ರವಾರ ತಿಳಿಸಿದ್ದಾರೆ.
ಭ್ರಷ್ಟಾಚಾರ ಆರೋಪದಲ್ಲಿ ಸೆರೆಮನೆವಾಸ ಅನುಭವಿಸುತ್ತಿರುವ ಜಿಯಾ ಅವರ ಬಿಡುಗಡೆಗೆ ಸಂಬಂಧಿಸಿದಂತೆ ಕಾನೂನು ಚೌಕಟ್ಟಿನ ಕುರಿತು ಪರಿಶೀಲಿಸುತ್ತಿರುವುದಾಗಿ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಎರಡು ಪ್ರಕರಣಗಳಲ್ಲಿ ಜಿಯಾ ಅವರಿಗೆ ನ್ಯಾಯಾಲಯದಿಂದ ಜಾಮೀನು ದೊರೆಯುವ ನಿರೀಕ್ಷೆ ಹೊಂದಲಾಗಿದೆ ಎಂದು ಜಿಯಾ ವಕೀಲರ ಹೇಳಿಕೆಯನ್ನು ಉಲ್ಲೇಖಿಸಿ ಪ್ರೊಥೊಮ್ ಅಲೂ ದೈನಿಕ ವರದಿ ಮಾಡಿದೆ.
ಜಿಯಾ ಅವರ ಬಿಡುಗಡೆಗೆ ಸಂಬಂಧಿಸಿದಂತೆ ಕಾನೂನು ರೀತ್ಯಾ ಪರಿಶೀಲನೆ ನಡೆಸುತ್ತಿರುವುದಾಗಿ ಆಂತರಿಕ ಕ್ಯಾಬಿನೆಟ್‌ನ ಆರ್ಥಿಕ ಸಲಹೆಗಾರ ಹುಸೈನ್ ಜಿಲ್ಲುರ್ ರಹಮಾನ್ ಅವರ ಹೇಳಿಕೆ ಹೊರಬಿದ್ದ ಬೆನ್ನಲ್ಲೇ,ಜಿಯಾ ಅವರ ವಕೀಲರು ಶುಕ್ರವಾರ ಈ ಹೇಳಿಕೆ ನೀಡಿದ್ದಾರೆ.
|