ಅಮೆರಿಕ ಅಧ್ಯಕ್ಷ ಜಾರ್ಜ್ ಬುಶ್, ಪಾಕಿಸ್ತಾನದ ನೂತನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿಯವರನ್ನು ಅಭಿನಂದಿಸಿದ್ದು, ಇಸ್ಲಾಮಿಕ್ ಉಗ್ರಗಾಮಿಗಳ ವಿರುದ್ಧದ ಹೋರಾಟಕ್ಕೆ ಅಮೆರಿಕವು ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ.
ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವಕ್ಕೆ ಬೆದರಿಕೆಯೊಡ್ಡುತ್ತಿರುವ ಉಗ್ರಗಾಮಿಗಳ ವಿರುದ್ಧದ ಹೋರಾಟವು ಪಾಕಿಸ್ತಾನಕ್ಕೆ ಅಗತ್ಯವಾಗಿದೆ ಎಂದು ಬುಷ್ ಹೇಳಿದ್ದಾರೆ.
ಪಾಕಿಸ್ತಾನವನ್ನು ಉಗ್ರಗಾಮಿಗಳ ಸುರಕ್ಷಿತ ತಾಣವನ್ನಾಗಿ ಮಾಡದೆ, ಉಗ್ರಗಾಮಿಗಳ ವಿರುದ್ಧ ಹೋರಾಡುವುದು ಪಾಕಿಸ್ತಾನದ ಹೊಣೆಯಾಗಿದೆ ಎಂದು ಬುಷ್ ಅಭಿಪ್ರಾಯಿಸಿದ್ದಾರೆ.
ನ್ಯೂಯಾರ್ಕ್‌ನಲ್ಲಿ ಸೆಪ್ಟೆಂಬರ್ 23ರಿಂದ 25ರವರೆಗೆ ನಡೆಯಲಿರುವ ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಜರ್ದಾರಿ ಅವರನ್ನು ಭೇಟಿ ಮಾಡುವ ಯೋಜನೆಯನ್ನು ಬುಷ್ ಹೊಂದಿದ್ದಾರೆ ಎಂದು ಶ್ವೇತಭವನ ವಕ್ತಾರರು ತಿಳಿಸಿದ್ದಾರೆ.
|