ಪಾಕ್ ನೆಲದಲ್ಲಿ ಅಮೆರಿಕ ನೇತೃತ್ವದ ಪಡೆಗಳು ಉಗ್ರರ ವಿರುದ್ದ ದಾಳಿ ನಡೆಸುತ್ತಿರುವ ಕುರಿತಂತೆ ಪಾಕ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಹಿನ್ನೆಲೆಯಲ್ಲಿ, ಯಾವುದೇ ಹೇಳಿಕೆ ನೀಡಲು ಅಮೆರಿಕ ಅಧ್ಯಕ್ಷ ಜಾರ್ಜ್ ಬುಷ್ ಅಡಳಿತ ನಿರಾಕರಿಸಿದೆ.
ಅಫಘಾನಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಮೆರಿಕ ನೇತೃತ್ವದ ಮಿತ್ರಪಡೆಗಳಿಗೆ ಗಡಿಯನ್ನು ದಾಟಿ ದಾಳಿ ನಡೆಸುವ ಅಧಿಕಾರವಿದೆಯೇ ಎಂದು ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ರಕ್ಷಣಾ ಕಾರ್ಯದರ್ಶಿ ರಾಬರ್ಟ್ ಗೇಟ್ಸ್ , ಆದರೆ ಕಮಾಂಡರ್‌ಗಳಿಗೆ ತಮ್ಮ ಪಡೆಗಳನ್ನು ರಕ್ಷಿಸುವ ಅಧಿಕಾರವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಜಾರ್ಜ್ ಬುಷ್ ಅಮೆರಿಕ ನೇತೃತ್ವದ ಮಿತ್ರಪಡೆಗಳಿಗೆ ಪಾಕ್ ಗಡಿಯನ್ನು ದಾಟಿ ದಾಳಿ ನಡೆಸುವಂತೆ ಆದೇಶ ನೀಡಿದ್ದಾರೆ ಎನ್ನುವ ವರದಿಗಳುಪಾಕ್ ಸೇನಾಧಿಕಾರಿಗಳ ಅಕ್ರೋಶಕ್ಕೆ ಕಾರಣವಾಗಿದೆ ಎಂದು ಸೇನಾಪಡೆಗಳ ವಕ್ತಾರರು ತಿಳಿಸಿದ್ದಾರೆ.
|