ಇಸ್ರೇಲ್ ಪ್ರಧಾನಮಂತ್ರಿ ಇಹೌದ್ ಒಲ್‌ಮಾರ್ಟ್ ಅವರು ಭಾನುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದರು.
ತಾನು ತನ್ನ ಪ್ರಧಾನಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಪ್ರಧಾನಿ ಒಲ್‌ಮಾರ್ಟ್ ಅವರು ತಿಳಿಸಿರುವುದಾಗಿ ಸುದ್ದಿಸಂಸ್ಥೆಯ ವರದಿಯೊಂದು ತಿಳಿಸಿದೆ.
ಭ್ರಷ್ಟಾಚಾರ ಆರೋಪದಲ್ಲಿ ಕ್ರಿಮಿನಲ್ ವಿಚಾರಣೆಯನ್ನು ಎದುರಿಸುತ್ತಿರುವ ಪ್ರಧಾನಿ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಿರುವುದಾಗಿ ತಿಳಿಸಿದ್ದು, ವಾರಗಳ ಕಾಲ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಮಾತನಾಡಿದ ಅವರು ಉತ್ತಮ ಆಡಳಿತವನ್ನು ನೀಡಿರುವ ತೃಪ್ತಿ ತನಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಏತನ್ಮಧ್ಯೆ ಒಲ್‌ಮಾರ್ಟ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಅಧ್ಯಕ್ಷ ಶಿಮೊನ್ ಪೆರೆಸ್ ಅವರಿಗೆ ಯಾವಾಗ ಸಲ್ಲಿಸಲಿದ್ದಾರೆ ಎಂಬುದು ನಿಖರವಾಗಿ ತಿಳಿದು ಬಂದಿಲ್ಲ.
|