ಭಾರತ ಅಮೆರಿಕ ಪರಮಾಣು ಒಪ್ಪಂದದ ಮಾದರಿಯಲ್ಲಿಯೇ, ಫ್ರಾನ್ಸ್‌ನೊಂದಿಗೆ ನಾಗರಿಕ ಪರಮಾಣು ಒಪ್ಪಂದವನ್ನು ನಡೆಸಲು ಭಾರತವು ಉತ್ಸುಕಕೊಂಡಿದೆ.
ಸೆಪ್ಟೆಂಬರ್ 30ರಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಫ್ರಾನ್ಸ್ ಅಧ್ಯಕ್ಷ ಸರ್ಕೋಜಿ ಅವರನ್ನು ಭೇಟಿ ಮಾಡುವ ಸಂದರ್ಭದಲ್ಲಿ ಪರಮಾಣು ಸಹಕಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ ಎಂದು ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಯುರೋಪಿಯನ್ ಒಕ್ಕೂಟದ ಅಧ್ಯಕ್ಷರಾಗಿರುವ ಸರ್ಕೋಜಿ ಅವರನ್ನು ಭೇಟಿ ಮಾಡಲಿದ್ದು, ಅವರೊಂದಿಗೆ ಒಪ್ಪಂದದ ಕುರಿತಾಗಿ ಮಾತುಕತೆ ನಡೆಸಲಿದ್ದೇನೆ. ಭಾರತ ಮತ್ತು ಫ್ರಾನ್ಸ್ ನಡುವಿನ ನಾಗರಿಕ ಪರಮಾಣು ಸಹಕಾರ ಒಪ್ಪಂದ ಸಂಬಂಧ ಪ್ರಾಥಮಿಕ ಕಾರ್ಯಗಳು ಪೂರ್ಣಗೊಂಡಿದ್ದು, ಸರ್ಕೋಜಿ ಭೇಟಿಯ ವೇಳೆ ಒಪ್ಪಂದಕ್ಕೆ ಸಹಿ ಹಾಕುವ ಸಂಭವವಿದೆ ಎಂದು ಸಿಂಗ್ ಹೇಳಿದ್ದಾರೆ.
ಜನವರಿ ತಿಂಗಳಲ್ಲಿ ಫ್ರೆಂಚ್ ಅಧ್ಯಕ್ಷ ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪರಮಾಣು ಇಂಧನ ಕ್ಷೇತ್ರದಲ್ಲಿ ಸಹಕಾರ ನೀಡುವ ಬಗ್ಗೆ ಎರಡೂ ನಾಯಕರು ಜಂಟಿ ಹೇಳಿಕೆ ನೀಡಿದ್ದರು. ಐಎಇಎಯಿಂದ ಅನುಮೋದನೆ ಪಡೆದ ನಂತರ ಮತ್ತು ಎನ್ಎಸ್‌ಜಿಯಿಂದ ವಿನಾಯತಿ ಪಡೆದ ನಂತರ, ಫ್ರಾನ್ಸ್ ಮತ್ತು ರಶ್ಯಾದೊಂದಿಗೆ ಭಾರತವು ನಾಗರಿಕ ಪರಮಾಣು ಒಪ್ಪಂದಕ್ಕೆ ಸಹಿ ಹಾಕುವ ಸಂಭಾವ್ಯತೆಯು ದಟ್ಟವಾಗಿತ್ತು.
|