ಪೂರ್ವ ಬಾಗ್ದಾದ್ನಲ್ಲಿ ಮಿನಿ ಬಸ್ವೊಂದು ಸಾಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಇರಿಸಿದ್ದ ಬಾಂಬ್ ಸ್ಪೋಟಗೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿರುವುದಾಗಿ ಪೊಲೀಸ್ ಹಾಗೂ ಆಸ್ಪತ್ರೆ ಮೂಲಗಳು ತಿಳಿಸಿವೆ.
ಇರಾಕ್ ಗೃಹ ಸಚಿವಾಲಯದ ನೌಕರರನ್ನು ಮಿನಿ ಬಸ್ ಹೊತ್ತೊಯ್ಯುತ್ತಿದ್ದ ಸಂದರ್ಭದಲ್ಲಿ ಸೋಮವಾರ ಶಿಯಾ ಪ್ರಾಬಲ್ಯ ಹೊಂದಿರುವ ಮಸ್ತಾಲ್ ಪ್ರದೇಶದಲ್ಲಿ ಈ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ಹೇಳಿವೆ.
ಗಾಯಾಳುಗಳನ್ನು ಬಾಗ್ದಾನ್ನ ಕಿಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿಗತಿ ಕುರಿತು ಅಧಿಕಾರಿಗಳು ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. |