ಕೊಲಂಬೊ : ಶ್ರೀಲಂಕಾದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ ಸುಮಾರು 76 ಸಾವಿರ ಜನರು ತೊಂದರೆ ಅನುಭವಿಸುವಂತಾಗಿದ್ದು ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸರಕಾರ ಸಮರೋಪಾದಿಯಲ್ಲಿ ಕಾರ್ಯಾಚರಣೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರವಾಹದಲ್ಲಿ ಸಿಲುಕಿದ ಜನರನ್ನು ನಿರಾಶ್ರಿತ ಶಿಬಿರಗಳಿಗೆ ಸ್ಥಳಾಂತರಿಸಲಾಗುತ್ತಿದ್ದು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ ಎಂದು ಸಚಿವ ರಿಶಾದ್ ಬತಿಯುದ್ದಿನ್ ತಿಳಿಸಿದ್ದಾರೆ.
ಉತ್ತರ ಶ್ರೀಲಂಕಾದ ಪುಟ್ಟಾಲಂ ಮತ್ತು ಗಲ್ಲೆ ಜಿಲ್ಲೆಗಳ ಕಲುತರಾ, ಗಂಪಾ, ಮಟಾರಾ ಗ್ರಾಮಗಳನ್ನು ಪ್ರವಾಹ ಸುತ್ತುವರಿದಿದ್ದು, ಸುಮಾರು 18,082 ಕುಟುಂಬಗಳು ಅಪಾಯಕ್ಕೆ ಸಿಲುಕಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಲಂಕಾ ಸರಕಾರ ನೀಡಿದ 6.3 ಮಿಲಿಯನ್ ಹಣವನ್ನು ಪುನರ್ವಸತಿ ಹಾಗೂ ಪರಿಹಾರ ಕಾರ್ಯಾಚರಣೆಗಾಗಿ ಜಿಲ್ಲಾಡಳಿತಕ್ಕೆ ನೀಡಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಸುರಿದ ಭಾರಿ ಮಳೆಯಿಂದಾಗಿ 16 ಮನೆಗಳು ಸಂಪೂರ್ಣ ನಾಶವಾಗಿದ್ದು, 68 ಮನೆಗಳು ಕುಸಿತದ ಹಂತದಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪರಿಹಾರ ಕಾರ್ಯಾಚರಣೆ ಕೇಂದ್ರ, ಪರಿಸ್ಥಿತಿಯ ಅವಲೋಕನ ಮಾಡುತ್ತಿದ್ದು ತುರ್ತುಪರಿಹಾರ ಕಾರ್ಯಾಚರಣೆ ನಡೆಸಲು ಸನ್ನದ್ದವಾಗಿದೆ ಎಂದು ಮೂಲಗಳು ತಿಳಿಸಿವೆ. |