ಜಾಗತಿಕ ಮಟ್ಟದಲ್ಲಿ ತಲೆದೋರಿರುವ ಆರ್ಥಿಕ ಬಿಕ್ಕಟ್ಟು ಸಾಮಾನ್ಯ ಜನರ ಮೇಲೆ ಪರಿಣಾಮ ಬೀರದಂತೆ ಎಚ್ಚರ ವಹಿಸಬೇಕು ಮತ್ತು ಈ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಹಿಡಿಯಬೇಕು ಎಂದು ವಿಶ್ವಸಂಸ್ಥೆಯ ಮಹಾ ಪ್ರಧಾನ ಕಾರ್ಯದರ್ಶಿ ಬಾನ್ ಕೀ ಮೂನ್ ಅವರು ಶನಿವಾರ ಆರಂಭಗೊಂಡ ಜಿ-20 ಶೃಂಗಸಭೆಯಲ್ಲಿ ವಿವಿಧ ರಾಷ್ಟ್ರಗಳ ನಾಯಕರಿಗೆ ಕರೆ ನೀಡಿದರು.
ಜಿ-20ರಾಷ್ಟ್ರಗಳ ಶೃಂಗಸಭೆಯಲ್ಲಿ ಭಾಗವಹಿಸಿದ್ದ ವಿಶ್ವದ 20ಮುಂದುವರಿದ ಹಾಗೂ ಅಭಿವೃದ್ಧಿಶೀಲ ರಾಷ್ಟ್ರಗಳ ನಾಯಕರಿಗೆ ಬಾನ್ ಅವರು ಪತ್ರ ರವಾನಿಸಿದ್ದಾರೆ. ಬಡತನ ಮತ್ತು ಹಸಿವು, ಆಹಾರ ಸಮಸ್ಯೆ ಮತ್ತು ಹವಾಮಾನ ಬದಲಾವಣೆ ವಿಷಯಗಳಂತೆಯೇ ಆರ್ಥಿಕ ಸಮಸ್ಯೆಯನ್ನು ಕಡೆಗಣಿಸಬಾರದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಸಭೆಯಲ್ಲಿ ಭಾರತ ಸೇರಿದಂತೆ ಅನೇಕ ರಾಷ್ಟ್ರಗಳ ಹಣಕಾಸು ಸಚಿವರು, ಆರ್ಥಿಕ ತಜ್ಞರು, ಸೆಂಟ್ರಲ್ ಬ್ಯಾಂಕ್ ಗವರ್ನರ್,ಐಎಂಎಫ್, ವಿಶ್ವಬ್ಯಾಂಕ್, ವಲಯ ಅಭಿವೃದ್ದಿ ಬ್ಯಾಂಕ್‌ಗಳ ವರಿಷ್ಠರು ಪಾಲ್ಗೊಂಡಿದ್ದರು.
ಪ್ರಧಾನಿ ಮನಮೋಹನ್ ಸಿಂಗ್ ಸೇರಿದಂತೆ ಜಿ-20ರಾಷ್ಟ್ರಗಳ ಸದಸ್ಯರು ಮತ್ತು ಇತರ ವಿಶ್ವ ನಾಯಕರನ್ನು ಔತಣಕೂಟಕ್ಕೆ ಆಹ್ವಾನಿಸಿದ ಬುಷ್ ದಂಪತಿ, ನಂತರ ಶ್ವೇತಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. |