ರಷ್ಯಾ ಅಧ್ಯಕ್ಷ ಡಮಿಟ್ರಿ ಮೆಡ್ವೆಡೇವ್ ಶುಕ್ರವಾರ ಬೆಳಿಗ್ಗೆ ಭಾರತಕ್ಕೆ ಆಗಮಿಸಿದ್ದು, ದ್ವಿಪಕ್ಷೀಯ ಮಾತುಕತೆಯೊಂದಿಗೆ ಅಣು ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತಮ್ಮ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿವೆ.
ಮೆಡ್ವಡೇವ್ ಇಂದು ಪ್ರಧಾನಿ ಡಾ.ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಲ್ಲದೇ ಭಯೋತ್ಪಾದನೆ ವಿಷಯದ ಕುರಿತು ಮಹತ್ವದ ಚರ್ಚೆ ನಡೆಸಿದರು.
ಮೂರು ದಿನಗಳ ಕಾಲದ ಭೇಟಿಗಾಗಿ ಭಾರತಕ್ಕೆ ಆಗಮಿಸಿರುವ ಮೆಡ್ವಡೇವ್, ಮುಂಬೈ ದಾಳಿಯ ಹಿನ್ನೆಲೆಯಲ್ಲಿ ಭಯೋತ್ಪಾದನೆ ಕುರಿತು ಪ್ರಮುಖವಾಗಿ ಚರ್ಚಿಸಿದ ಬಳಿಕ, ನಾಗರಿಕ ಪರಮಾಣು ಒಪ್ಪಂದಕ್ಕೆ ರಷ್ಯಾ ಮತ್ತು ಭಾರತ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಭಾರತ ಮತ್ತು ಅಮೆರಿಕ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಎನ್‌ಎಸ್‌ಜಿಯ ಅನುಮತಿ ಪಡೆದದ್ದಕ್ಕಾಗಿ ಮೆಡ್ವಡೇವ್ ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮತ್ತು ಮೆಡ್ವಡೇವ್ ಅವರ ನಡುವೆ ನಡೆಯಲಿರುವ ದ್ವಿಪಕ್ಷೀಯ ಮಾತುಕತೆಯಲ್ಲಿ ಹಲವಾರು ಒಪ್ಪಂದಗಳಿಗೆ ಸಹಿ ಹಾಕಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ. |