ಮುಂಬೈ ದಾಳಿಗೆ ಸಂಬಂಧಿಸಿದಂತೆ ಭಾರತ ಮತ್ತು ಪಾಕ್ ನಡುವಿನ ಯುದ್ದಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚರ್ಚೆ ನಡೆಸುವ ನಿಟ್ಟಿನಲ್ಲಿ ಸೌದಿ ಗುಪ್ತಚರ ಇಲಾಖೆಯ ವರಿಷ್ಠ ರಾಜ ಮೌರಿಕ್ ಬಿನ್ ಅಬ್ದುಲ್ ಅಜೀಜ್ ಮಂಗಳವಾರ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ.
ರಾಜ ಮೌರಿಕ್ ಬಿನ್ ಅಬ್ದುಲ್ ಅಜೀಜ್ ಅವರು ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ, ಪ್ರಧಾನಿ ಯೂಸೂಫ್ ರಾಜಾ ಗಿಲಾನಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಜಿಯೋ ಟಿವಿ ವರದಿ ತಿಳಿಸಿದೆ. ರಾಜ ಮೌರಿಕ್ ಅವರು ಗಿಲಾನಿ ಅವರೊಂದಿಗೆ ಮೊದಲು ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದೆ.
ಪಾಕಿಸ್ತಾನದಲ್ಲಿರುವ ಸೌದಿ ರಾಯಭಾರಿ ಅಲಿ ಅವಾಧ್ ಅಲ್ ಅಸ್ಸೇರಿ ಅವರು ಏರ್ಪಡಿಸಿರುವ ಔತಣಕೂಟಕ್ಕೆ ಅಜೀಜ್ ಆಗಮಿಸಿದ್ದು, ಈ ಸಂದರ್ಭದಲ್ಲಿ ರಾಜಕೀಯದ ಪ್ರಮುಖ ವರಿಷ್ಠರು ಕೂಡ ಪಾಲ್ಗೊಳ್ಳಲಿದ್ದಾರೆ. |