ಪಾಕಿಸ್ತಾನದ ವಾಯುವ್ಯ ಭಾಗದ ದೇರಾ ಇಸ್ಮಾಯಿಲ್ ಖಾನ್ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 4ಮಂದಿ ಸಾವನ್ನಪ್ಪಿದ್ದು, 10ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.
ಪಾಕ್‌ನ ನಾರ್ತ್ ವೆಸ್ಟರ್ನ್ ಫ್ರಂಟಿಯರ್ ಪ್ರದೇಶದ ಮಧ್ಯಭಾಗದಲ್ಲಿರುವ ಹಾಲ್‌ವೊಂದರ ಸಮೀಪ ಬಾಂಬ್ ಸ್ಫೋಟಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವುದಾಗಿ ಪಿಟಿವಿ ವರದಿ ತಿಳಿಸಿದ್ದರೆ, ಬೇರೆ ಮಾಧ್ಯಮಗಳ ವರದಿ ಪ್ರಕಾರ ಸಾವಿನ ಸಂಖ್ಯೆ 4ಕ್ಕೇರಿದ್ದು, ಖಚಿತವಾಗಿ ಯಾವುದೇ ವಿವರ ಲಭಿಸಿಲ್ಲ ಎಂದು ವರದಿ ಹೇಳಿದೆ.
ಬಾಂಬ್ ಸ್ಫೋಟದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಕುರಿತು ಈವರೆಗೂ ಖಚಿತ ಮಾಹಿತಿ ಲಭಿಸಿಲ್ಲ, ಅಲ್ಲದೇ ಸ್ಫೋಟ ಘಟನೆಯ ಹೊಣೆಯನ್ನು ಯಾವುದೇ ಸಂಘಟನೆಗಳೂ ಹೊತ್ತುಕೊಂಡಿಲ್ಲ. |