ಕಾಶ್ಮೀರ ಸಮಸ್ಯೆಯನ್ನು ಪಾಕಿಸ್ತಾನ ಅಂತಾರಾಷ್ಟ್ರೀಯ ವಿವಾದವನ್ನಾಗಿ ಮಾಡುವ ಅಗತ್ಯವಿಲ್ಲ ಎಂದಿರುವ ಪಾಕ್‌ನ ಮಾಜಿ ವಿದೇಶಾಂಗ ಕಾರ್ಯದರ್ಶಿ ರಿಯಾಜ್ ಖಾನ್, ಆ ವಿವಾದವನ್ನು ದ್ವಿಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಕಾಶ್ಮೀರ ವಿವಾದ ಗಂಭೀರ ವಿಷಯವಾಗಿದೆ, ಆ ನಿಟ್ಟಿನಲ್ಲಿ ಎರಡೂ ದೇಶಗಳು ದ್ವಿಪಕ್ಷೀಯ ಮಾತುಕತೆಯೊಂದಿಗೆ ವಿವಾದವನ್ನು ಬಗೆಹರಿಸಿಕೊಳ್ಳಬೇಕು ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಕಾರ್ಯದರ್ಶಿ ರಿಯಾಜ್ ಮೊಹಮ್ಮದ್ ಖಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅನಾವಶ್ಯಕವಾಗಿ ಕಾಶ್ಮೀರ ವಿವಾದವನ್ನು ಅಂತಾರಾಷ್ಟ್ರೀಕರಣಗೊಳಿಸುವ ಅಗತ್ಯವಿಲ್ಲ ಎಂದು ಒತ್ತಿ ಹೇಳಿರುವ ಅವರು, ಸೌಹಾರ್ದತೆಯ ಮಾತುಕತೆ ಮೂಲಕ ಇತ್ಯರ್ಥಪಡಿಸಿಕೊಳ್ಳಬೇಕು ಎಂದಿದ್ದಾರೆ.
ಅವರು ವುಡ್ರೋ ವಿಲ್ಸನ್ ಅಂತಾರಾಷ್ಟ್ರೀಯ ಕೇಂದ್ರದ ಬುದ್ದಿಜೀವಿಗಳ ಸಭೆಯಲ್ಲಿ ಮಾತನಾಡಿದ ಅವರು,ಈ ವಿವಾದ ಕುರಿತು ಭಾರತ ಮತ್ತು ಪಾಕಿಸ್ತಾನ ಗಂಭೀರವಾಗಿ ಚರ್ಚಿಸಬೇಕು, ನಾವು ಕೂಡ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತೇವೆ. ಸಮಸ್ಯೆ ಇತ್ಯರ್ಥವಾಗುವುದು ಕಾಶ್ಮೀರದ ಜನತೆಯ ದೃಷ್ಟಿಯಂದ ತುಂಬಾ ಮುಖ್ಯವಾದುದು ಎಂದು ಹೇಳಿದರು. |