ಅಫ್ಘಾನಿಸ್ತಾನದ ಬಗ್ಗೆ ಅಮೆರಿಕದ ನೀತಿ ಸಂಪೂರ್ಣ ವಿಫಲವಾಗಿರುವುದಾಗಿ ಪಾಕಿಸ್ತಾನ ಪ್ರಧಾನಮಂತ್ರಿ ಯೂಸೂಫ್ ರಾಜಾ ಗಿಲಾನಿ ಅವರು ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಫೋರಂನ(ಡಬ್ಲ್ಯುಇಎಫ್)ನಲ್ಲಿ ಮಾತನಾಡುತ್ತ ತಿಳಿಸಿದ್ದಾರೆ.
ಗಡಿಭಾಗದಲ್ಲಿ ನಡೆಯುತ್ತಿರುವ ಭಯೋತ್ಪಾದನೆಯನ್ನು ಮಟ್ಟ ಹಾಕುವಲ್ಲಿ ಪಾಕಿಸ್ತಾನ ಸಾಕಷ್ಟು ಕಾರ್ಯಾಚರಣೆ ನಡೆಸಿರುವುದಾಗಿಯೂ ಈ ಸಂದರ್ಭದಲ್ಲಿ ಹೇಳಿದರು.
ಭಯೋತ್ಪಾದನೆಯನ್ನು ತಡೆಗಟ್ಟುವಲ್ಲಿ ಇತರೆಲ್ಲ ದೇಶಗಳಿಗಿಂತ ಹೆಚ್ಚಾಗಿ ಪಾಕಿಸ್ತಾನವೇ ತುಂಬಾ ಕಾಳಜಿ ವಹಿಸಿದೆ ಎಂದು ಗಿಲಾನಿ ದೇಶದ ನೀತಿಯನ್ನು ಸಮರ್ಥಿಸಿಕೊಂಡರು.
ಅಲ್ಲದೇ ದೇಶದೊಳಗೆ ಶಾಂತಿ ನೆಲೆಸುವುದನ್ನು ಎದುರು ನೋಡುತ್ತೇವೆ. ಹಾಗೆಯೇ ಅಫ್ಘಾನಿಸ್ತಾನದಲ್ಲಿ ಉತ್ತಮ ಬೆಳವಣಿಗೆಯಾಗಬೇಕು ಎಂಬ ನಿರೀಕ್ಷೆಯನ್ನು ಹೊಂದಿರುವುದಾಗಿ ತಿಳಿಸಿದರು. |