ಉಗ್ರರಿಗೆ ಕಡಿವಾಣ ಹಾಕುತ್ತಿಲ್ಲ ಎಂಬ ಅಂತಾರಾಷ್ಟ್ರೀಯ ಸಮುದಾಯದ ಆಪಾದನೆಗೆ ಮಣಿದಿರುವ ಪಾಕಿಸ್ತಾನ, ಭಯೋತ್ಪಾದನಾ ಕೃತ್ಯಗಳಿಗೆ ತನ್ನ ನೆಲ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದೆ.
ನಾನು ನಿಮಗೆ ಭರವಸೆ ನೀಡುತ್ತೇನೆ. ಯಾವತ್ತೂ ನಮ್ಮ ನೆಲವನ್ನು ಭಯೋತ್ಪಾದನಾ ಕೃತ್ಯಗಳಿಗೆ ಬಳಸಲು ಅವಕಾಶ ಕಲ್ಪಿಸುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಯೂಸೂಫ್ ರಾಜಾ ಗಿಲಾನಿ ಜಾಗತಿಕ ಆರ್ಥಿಕ ವೇದಿಕೆಯಲ್ಲಿ ತಿಳಿಸಿದ್ದಾರೆ.
ಮುಂಬೈ ಘಟನೆಯನ್ನು ದುರದೃಷ್ಟಕರ ಎಂದು ಹೇಳಿದ ಅವರು, ಮುಂಬೈನಲ್ಲಾಗಲಿ ಅಥವಾ ಇಸ್ಲಾಮಾಬಾದ್, ಕರಾಚಿಯಲ್ಲಾಗಲಿ ನಡೆಯುವ ಭಯೋತ್ಪಾದನೆಯನ್ನು ನಾವು ಖಂಡಿಸುತ್ತೇವೆ. ಭಯೋತ್ಪಾದನಾ ಕೃತ್ಯಗಳಿಗೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
ಪಾಕಿಸ್ತಾನ ಮತ್ತು ಅದರ ನೆರೆಹೊರೆ ಕುರಿತಾದ ವಿಚಾರಣ ಸಂಕಿರಣದಲ್ಲಿ ಮಾತನಾಡಿದ ಅವರು, ಭಾರತ ನೀಡಿದ ಸಾಕ್ಷಾಧಾರದ ಮೇಲೆ ಪಾಕಿಸ್ತಾನ ಸರ್ಕಾರ ತನಿಖೆಯನ್ನು ನಡೆಸುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಪುನರುಚ್ಚರಿಸಿದರು. |