ಶ್ರೀಲಂಕಾದ ಸೇನಾಪಡೆಗಳ ಹಾಗೂ ತಮಿಳು ಉಗ್ರರ ನಡುವಿನ ಕದನದಲ್ಲಿ ಮುಗ್ದ ನಾಗರಿಕರು ಹತ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಕದನ ವಿರಾಮವನ್ನು ಘೋಷಿಸುವಂತೆ ಒತ್ತಾಯಿಸಿ ಇಬ್ಬರು ಪ್ರಭಾವಿ ಸಂಸತ್ ಸದಸ್ಯರು ಸೇರಿದಂತೆ ಸುಮಾರು 1 ಲಕ್ಷ ಮಂದಿ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಆದರೆ 50 ಸಾವಿರಕ್ಕಿಂತ ಹೆಚ್ಚಿನ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು ಎಂದು ಲಂಡನ್‌ನ ಮೆಟ್ರೋಪಾಲಿಟನ್ ಪೊಲೀಸರು ತಿಳಿಸಿದ್ದಾರೆ.
ಬ್ರಿಟನ್‌ನ ಹಿರಿಯ ಸಂಸತ್ ಸದಸ್ಯ ಕೆವಿತ್ ವಾಝ್ ಹಾಗೂ ಮಾಧ್ಯಮಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡವರ ಸಂಖ್ಯೆ 1 ಲಕ್ಷಕ್ಕೂ ಹೆಚ್ಚಳವಾಗಿತ್ತು ಎಂದು ವರದಿಗಳಲ್ಲಿ ತಿಳಿಸಿದ್ದಾರೆ.
ಶ್ರೀಲಂಕಾದಲ್ಲಿ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯಿಂದಾಗಿ ಸುಮಾರು 2.50 ಲಕ್ಷ ಮಂದಿ ಮುಗ್ದ ಜನತೆ ತೊಂದರೆ ಎದುರಿಸುತ್ತಿದ್ದಾರೆ ಎನ್ನುವ ವರದಿಗಳ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯದಲ್ಲಿ ಕಳವಳ ವ್ಯಕ್ತವಾಗಿದ್ದು ಕೆನಡಾದಲ್ಲಿ ಸುಮಾರು 50 ಸಾವಿರ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬ್ಯಾನರ್, ಬಾಜಾ ಬಜಂತ್ರಿಗಳೊಂದಿಗೆ ಆಗಮಿಸಿದ ಪ್ರತಿಭಟನಾಕಾರರು ಬ್ರಿಟನ್ ಪ್ರಧಾನಿ ಗೋರ್ಡಾನ್ ಬ್ರೌನ್ ಅವರಿಗೆ ಮನವಿಯೊಂದನ್ನು ಸಲ್ಲಿಸಿ ಶೀಲಂಕಾದಲ್ಲಿ ಅಂತಾರಾಷ್ಟ್ರೀಯ ಸಮುದಾಯದ ಮೇಲ್ವಿಚಾರಣೆಯಲ್ಲಿ ಕದನ ವಿರಾಮ ಜಾರಿಗೊಳಿಸಲು ಶ್ರೀಲಂಕಾ ಸರಕಾರಕ್ಕೆ ಒತ್ತಾಯಿಸಬೇಕು ಎಂದು ಮನವಿ ಮಾಡಿದರು. |