ಉಗ್ರರ ದಾಳಿಗೆ ಪ್ರತಿದಾಳಿ ನಡೆಸುವುದಾಗಿ ಎಚ್ಚರಿಸಿದ ಇಸ್ರೇಲ್, ಗಾಜಾ ಪಟ್ಟಿಯಲ್ಲಿರುವ ಪ್ಯಾಲಿಸ್ತೇನಿ ಪೊಲೀಸ್ ಠಾಣೆಯ ಮೇಲೆ ವೈಮಾನಿ ಬಾಂಬ್ ದಾಳಿ ನಡೆಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಕಟ್ಟಡದ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಇಸ್ರೇಲ್ ವಾಯುಸೇನಾ ಪಡೆಗಳು ಗಾಜಾ ಪಟ್ಟಿಯ ಮೇಲೆ ಅನೇಕ ದಾಳಿಗಳನ್ನು ನಡೆಸಿವೆ ಎಂದು ಸೇನಾಪಡೆಗಳ ವಕ್ತಾರರು ತಿಳಿಸಿದ್ದಾರೆ.
ಇಸ್ರೇಲ್‌ನ ದಕ್ಷಿಣ ಭಾಗದಲ್ಲಿರುವ ನಗರದ ಮೇಲೆ ಹಮಾಸ್ ಉಗ್ರರು ರಾಕೆಟ್ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಮರುದಾಳಿ ನಡೆಸುವುದಾಗಿ ಪ್ರಧಾನಿ ಎಹೂದ್ ಒಲ್ಮಾರ್ಟ್ ಎಚ್ಚರಿಸಿದ್ದರಿಂದ ಇಸ್ರೇಲ್ ಮರು ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ. |