ನ್ಯೂಜೆರ್ಸಿಯಿಂದ ಬಫೆಲೋಗೆ ಹೊರಟಿದ್ದ ಅಮೆರಿಕ ವಿಮಾನವೊಂದು ಜನವಸತಿ ಪ್ರದೇಶಕ್ಕೆ ಅಪ್ಪಳಿಸಿದ ಪರಿಣಾಮ 49ಪ್ರಯಾಣಿಕರು ಬಲಿಯಾಗಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಮಾಧ್ಯಮಗಳ ವರದಿ ಪ್ರಕಾರ 49 ಜನರು ಸಾವನ್ನಪ್ಪಿರುವುದಾಗಿ ತಿಳಿಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳಗೊಳ್ಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವರ್ಷ ನಡೆದ ಅತಿ ದೊಡ್ಡ ವಿಮಾನ ದುರಂತ ಇದಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಜನರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬಫೆಲೋದಿಂದ ಈಶಾನ್ಯಕ್ಕೆ 20ಮೈಲಿಗಳ ದೂರದಲ್ಲಿ ಇಂದು ಬೆಳಿಗ್ಗೆ 10ಗಂಟೆ ಸುಮಾರಿಗೆ ಜನವಸತಿ ಪ್ರದೇಶಕ್ಕೆ ಅಪ್ಪಳಿಸಿದ ಪರಿಣಾಮ ಈ ದುರಂತ ಸಂಭವಿಸಿರುವುದಾಗಿ ಪ್ರತ್ಯಕ್ಷದರ್ಶಿ ಜಾನ್ ಮೆಂಟಿ ವಿವರಿಸಿದ್ದಾರೆ. |