ಆಗ್ನೇಯ ಬಾಂಗ್ಲಾದೇಶದಲ್ಲಿ ಬಸ್ಸೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು ಕಾಲೇಜು ವಿದ್ಯಾರ್ಥಿ ಹಾಗೂ ಅಧ್ಯಾಪಕರ ಸಹಿತ 12 ಮಂದಿ ಮೃತಪಟ್ಟ ಧಾರುಣ ಘಟನೆ ವರದಿಯಾಗಿದೆ. ಘಟನೆಯಲ್ಲಿ ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು 20 ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಾಲೇಜು ವಿದ್ಯಾರ್ಥಿ, ಅಧ್ಯಾಪಕರು ಸೇರಿದಂತೆ ಬಸ್‌ನಲ್ಲಿ ಒಟ್ಟು 50 ಪ್ರಯಾಣಿಕರಿದ್ದರು. ಪ್ರವಾಸಕ್ಕೆ ತೆರಳಿ ಚಿತ್ತಾಗಾಂಗ್‌ಗೆ ಹಿಂತಿರುಗುತ್ತಿದ್ದ ವೇಳೆ ಕಣಿವೆ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಆಳದ ಕದಂಕಕ್ಕೆ ಉರುಳಿ ಬಿದ್ದಿದ್ದು, ಈ ಪರಿಣಾಮ ಅವಘಡ ಸಂಭವಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.
6 ಮಂದಿ ಸ್ಥಳದಲ್ಲಿಯೇ ಮೃತಪಟ್ಟದ್ದು, ಗಾಯಗೊಂಡವರನ್ನು ಬಂದರ್‌ಬನ್ ಮತ್ತು ಚಿತ್ತಾಗಾಂಗ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
|