ಇರಾನ್ ಜತೆಗಿನ ಅನಿಲ ಕೊಳವೆ ಮಾರ್ಗ ಯೋಜನೆಯಲ್ಲಿ ತೊಡಗಿಕೊಳ್ಳಲು ತಾನು ಸಿದ್ಧವಿರುವುದಾಗಿ ಪಾಕಿಸ್ಥಾನ ಹೇಳಿದೆ. ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಇರಾನ್ ಪ್ರವಾಸ ಕೈಗೊಳ್ಳುತ್ತಿರುವ ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅನಿಲ ಕೊಳವೆ ಮಾರ್ಗ ಯೋಜನೆಗೆ ಸಿದ್ಧವಿದೆ ಎಂದು ಹೇಳಿದ್ದಾರೆ. |