ಉತ್ತರ ಚೀನಾದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡವೊಂದು ಕುಸಿದು ಬಿದ್ದು ಒಂಬತ್ತು ಮಂದಿ ಕಾರ್ಮಿಕರು ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ನಾಲ್ಕು ಮಂದಿ ಕಾಣೆಯಾಗಿದ್ದು, ಕಟ್ಟಡದ ಅವಶಿಷ್ಟಗಳೆಡೆಯಲ್ಲಿ ಸಿಲುಕಿರಬಹುದೆಂದು ಅಂದಾಜಿಸಲಾಗಿದೆ. ಸುರಕ್ಷಾ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. |