ಅಮೆರಿಕದ ಮಿಸ್ಸೋರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಘಟನೆಯೊಂದರಲ್ಲಿ ಕುಡಿದು ಪಾನಮತ್ತಳಾಗಿದ್ದ ಮಹಿಳಾ ಪೊಲೀಸ್ ತಮ್ಮ ಕಾರನ್ನು ವಾಹನವೊಂದಕ್ಕೆ ಡಿಕ್ಕಿ ಹೊಡೆಸಿದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಭಾರತೀಯ ನಾಲ್ವರು ವಿದ್ಯಾರ್ಥಿಗಳು ಮೃತಿಪಟ್ಟಿದ್ದು, ಇನ್ನೊಬ್ಬನಿಗೆ ಗಂಭೀರ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ನಾಲ್ವರಲ್ಲಿ ಮೂವರು ವಿದ್ಯಾರ್ಥಿನಿಯರಾಗಿದ್ದು, ಆಂಧ್ರದ ಮೂಲದವರಾದ ಇವರೆಲ್ಲರು ಪೂರ್ವ ಇಲಿನಾಯಿಸ್ ವಿಶ್ವವಿದ್ಯಾಲಯದಲ್ಲಿ ಮಾಹಿತಿ ತಂತ್ರಜ್ಞಾನ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು. |