ಇಸ್ಲಾಮಾಬಾದ್: ಅಲ್‌ಖೈದಾ ಹಾಗೂ ತಾಲಿಬಾನ್ ಉಗ್ರರನ್ನು ಸದೆಬಡಿವ ನೆಪದಲ್ಲಿ ನಮ್ಮ ನೆಲದಲ್ಲಿ ವಿದೇಶೀ ಸೇನೆಗಳು ಕಾರ್ಯಾಚರಣೆ ನಡೆಸುವುದನ್ನು ನಾವು ಸಹಿಸುವುದಿಲ್ಲ ಎಂದು ಪಾಕಿಸ್ತಾನ ತನ್ನ ಅಸಮಾಧಾನವನ್ನು ಹೊರಹಾಕಿದೆ. ವಾಯುವ್ಯ ಪಾಕಿಸ್ತಾನದ ಗುಡ್ಡಗಾಡು ಪ್ರಾಂತಗಳಲ್ಲಿ ಅಡಗಿರುವ ಉಗ್ರರನ್ನು ಮಟ್ಟಹಾಕಲು ಅಮೆರಿಕ ನಡೆಸುತ್ತಿರುವ ವೈಮಾನಿಕ ದಾಳಿಗೆ ಪಾಕ್ ವಿದೇಶಾಂಗ ಸಚಿವ ಮಹಮ್ಮದ್ ಖುರೇಶಿ ಹೀಗೆ ಪ್ರತಿಕ್ರಿಯಿಸಿದ್ದಾರೆ. |