ವಾಯವ್ಯ ಪಾಕಿಸ್ಥಾನದ ಢಿರ್ ಜಿಲ್ಲೆಯ ಪ್ರಾಥಮಿಕ ಶಾಲೆಯೊಂದರ ಬಳಿ ಇರಿಸಲಾಗಿದ್ದ ಸ್ಫೋಟಕ ತುಂಬಿದ್ದ ಗೊಂಬೆಯನ್ನು ಮಕ್ಕಳು ಆಟವಾಡಲು ಬಳಸಿದ ವೇಳೆ ಸಂಭವಿಸಿದ ಸ್ಫೋಟದಲ್ಲಿ 13 ಶಾಲಾ ಮಕ್ಕಳು ಬಲಿಯಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ. |