ವಾಯುವ್ಯ ಪಾಕಿಸ್ತಾನದಲ್ಲಿ ಪ್ರಶುಬ್ಧ ಪ್ರದೇಶದಲ್ಲಿ ತಾಲಿಬಾನ್ ಉಗ್ರರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ 70 ತಾಲಿಬಾನ್ ಉಗ್ರರು ಹತರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಪಾಕ್ ನೆಲದಿಂದ ಉಗ್ರರನ್ನು ಹೊರಗಟ್ಟುವ ಕಾರ್ಯವನ್ನು ಸೇನೆ ತೀವ್ರಗೊಳಿಸಿದೆ. |