ಹಂದಿ ಜ್ವರಕ್ಕೆ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾದ ಹಿನ್ನೆಲೆಯಲ್ಲಿ ಕೆನಡಾದ ಪ್ರಧಾನಿ ಸ್ಟೆಫನ್ ಹಾರ್ಪರ್ ಕಳವಳ ವ್ಯಕ್ತಪಡಿಸಿದ್ದು, ಹಂದಿ ಜ್ವರ ತಡೆಗೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.
ಹೊಸದಾಗಿ ಪತ್ತೆಯಾದ ಪ್ರಕರಣಗಳು ತೀವ್ರ ಸ್ವರೂಪವಾಗಿಲ್ಲವೆಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ವಿಶ್ವದಾದ್ಯಂತ ಎಲ್ಲ ಸರಕಾರಗಳು ಹಂದಿ ಜ್ವರ ವ್ಯಾಪಿಸದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಜನತೆ ಆತಂಕಪಡುವ ಅಗತ್ಯವಿಲ್ಲ. ಇದೊಂದು ಗಂಭೀರ ಪರಿಸ್ಥಿತಿ ಎದುರಾಗಿದೆ ಎಂದು ಪ್ರದಾನಿ ಹಾರ್ಪರ್ ಹೇಳಿದ್ದಾರೆ.
ನಾಗರಿಕರು ಆರೋಗ್ಯ ಅಧಿಕಾರಿಗಳು ನೀಡುವ ಮುನ್ನೆಚ್ಚರಿಕೆ, ಸಲಹಾ ಕ್ರಮಗಳನ್ನು ಪಾಲಿಸುವುದು ಅಗತ್ಯವಾಗಿದೆ. ಅಂತಹ ಯಾವುದೇ ಸೂಚನೆಗಳು ಕಂಡುಬಂದಲ್ಲಿ ವೈದ್ಯರನ್ನು ಕಾಣುವಂತೆ ಸಲಹೆ ನೀಡಿದ್ದಾರೆ.
ಹಂದಿ ಜ್ವರ ಪ್ರಕರಣಗಳು ಮೆಕ್ಸಿಕೊ ನಂತರ ಕೆನಡಾ ಎರಡನೇ ಸ್ಥಾನದಲ್ಲಿದ್ದು, ಅಮೆರಿಕ ಮೂರನೇ ಸ್ಥಾನದಲ್ಲಿದೆ ಎಂದು ಮೂಲಗಳು ತಿಳಿಸಿವೆ.
|