ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ, ಪಾಕ್ ಅಧ್ಯಕ್ಷ ಜರ್ದಾರಿ ಹಾಗೂ ಅಫ್ಘಾನಿಸ್ತಾನದ ಅಧ್ಯಕ್ಷ ಹಮೀದ್ ಕರ್ಜಾಯ್ ಬುಧವಾರ ಇಂದಿಲ್ಲಿ ಆರಂಭವಾಗಿರುವ ಶೃಂಗಸಭೆಯಲ್ಲಿ ತಾಲಿಬಾನ್ ಉಗ್ರರ ದಮನಕ್ಕೆ ಸಂಬಂಧ ಸುದೀರ್ಘ ಸಮಾಲೋಚನೆ ನಡೆಸಲಾಯಿತು.
ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರರ ಉಪಟಳ ಹೆಚ್ಚಾಗಿದ್ದರಿಂದ ಅಲ್ಲಿ ಶಾಂತಿಗೆ ಭಂಗ ಉಂಟಾಗಿತ್ತು. ಅಲ್ಲದೇ ಅಮೆರಿಕ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸಂಬಂಧಗಳಿಗೂ ಧಕ್ಕೆ ಉಂಟಾಗಿತ್ತು.
ಪಾಕ್ ಬಗ್ಗೆ ಅಮೆರಿಕ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕೂಡಲೇ ಎಚ್ಚೆತ್ತುಕೊಂಡ ಪಾಕ್, ತನ್ನ ವಾಯುವ್ಯ ಪ್ರಾಂತ್ಯದಲ್ಲಿ ಹೆಚ್ಚಾಗಿದ್ದ ತಾಲಿಬಾನ್ ಉಗ್ರರ ಉಪಟಳ ದಮನಕ್ಕೆ ಮಿಲಿಟರಿ ಕಾರ್ಯಾಚರಣೆ ಆರಂಭಿಸಿತ್ತು.
ತಾಲಿಬಾನ್ ಉಗ್ರರ ದಮಕ್ಕೆ ಪಾಕಿಸ್ತಾನ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ಮತ್ತೆ ಒತ್ತಡ ಹೇರಿದ್ದಾರೆ. ಅಲ್ಲದೇ ಅಮೆರಿಕದ ಪರಮಾಣು ನೆಲೆಗಳಿಗೆ ಸೂಕ್ತ ರಕ್ಷಣೆ ಒದಗಿಸುವ ಬಗ್ಗೆ ಪಾಕ್ ಖಾತರಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ. |