ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಶಾಂತಿಯಿಂದ ಕಾಶ್ಮೀರ ಸಮಸ್ಯೆಗೆ ಪರಿಹಾರ:ಗಿಲಾನಿ (pak | kashmir | solution | gilani)
 
ಕಾಶ್ಮಿರ ಸಮಸ್ಯೆಗೆ ಶಾಂತಿಯುತ ಮಾತುಕತೆಯಿಂದ ಮಾತ್ರ ಪರಿಹಾರ ಕಂಡುಕೊಳ್ಳಬಹುದು ಎಂದು ಪಾಕ್ ಪ್ರಧಾನಿ ಯುಸೂಫ್ ರಾಜಾ ಗಿಲಾನಿ ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನ ವಿದೇಶಾಂಗ ನೀತಿಗಳಿಂದಾಗಿ ನವದೆಹಲಿ ಹಾಗೂ ಇಸ್ಲಾಮಾಬಾದ್‌ಗಳು ಇತ್ತೀಚೆಗೆ ತೆಗೆದುಕೊಂಡ ಹಲವು ಕ್ರಮಗಳಿಂದಾಗಿ ಪರಿಸ್ಥಿತಿ ಸುಧಾರಣೆಯತ್ತ ಸಾಗಿದೆ ಎಂದು ಹೇಳಿದ್ದಾರೆ.

ಪಾಕಿಸ್ತಾನದ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಗಿಲಾನಿ, ರಾಷ್ಟ್ರಾಧ್ಯಕ್ಷ ಆಸಿಫ್ ಅಲಿ ಜರ್ದಾರಿ ಮತ್ತು ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಅವರು ಮಾತುಕತೆಗಳನ್ನು ಮುಂದುವರಿಸಿದ್ದು, ಫಲಿತಾಂಶ ಸಕಾರಾತ್ಮಕವಾಗಿರಲಿದೆ ಎನ್ನುವ ವಿಶ್ವಾಸವಿದೆ ಎಂದು ನುಡಿದರು.

ಉಭಯ ದೇಶಗಳ ನಡುವೆ ಶಾಂತಿ ಮತ್ತು ಭಧ್ರತೆಗಾಗಿ ಉಭಯ ದೇಶಗಳು ತೆಗೆದುಕೊಂಡ ನಿಲುವಿನಿಂದಾಗಿ ಸೌಹಾರ್ದ ವಾತಾವರಣ ಕಂಡುಬರುತ್ತಿದೆ ಎಂದು ಸಚಿವರು ಸಂಸದರು ಹಾಗೂ ಸೇನಾ ಮುಖ್ಯಸ್ಥರು ಹಾಜರಿದ್ದ ಸಭೆಯಲ್ಲಿ ಗಿಲಾನಿ ತಿಳಿಸಿದ್ದಾರೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ