ಥೈವಾನ್‌ನಲ್ಲಿ ಇತ್ತೀಚೆಗೆ ಸಂಭವಿಸಿದ ಮೊರಕೋಟ್ ಚಂಡಮಾರುತದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಭೂಕುಸಿತದ ವೇಳೆ ಸುಮಾರು 500 ಮಂದಿ ಸಾವನ್ನಪ್ಪಿದ್ದಾರೆ ಎಂದು ಥೈವಾನ್ ಅಧ್ಯಕ್ಷ ಮಾ ಯಿಂಗ್-ಜೆಯು ತಿಳಿಸಿದ್ದಾರೆ.
ಪರಿಹಾರ ಕಾರ್ಯಗಳು ಪಟ್ಟಣಗಳಿಗೆ ಮಾತ್ರ ಸೀಮಿತವಾಗಿದ್ದು ಹಳ್ಳಿಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಗ್ರಾಮಸ್ಥರು ಹಾಗೂ ವಿರೋಧ ಪಕ್ಷಗಳು ಆರೋಪಿಸಿವೆ. ಅಧ್ಯಕ್ಷರು ಈ ವಾರ ಹಳ್ಳಿಗಳಿಗೆ ಪ್ರವಾಸ ಮಾಡಿದ್ದ ವೇಳೆ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ಚಂಡಮಾರುತದಿಂದ ಸತ್ತವರ ಸಂಖ್ಯೆ 100 ಎಂದು ಅವರು ಈ ಹಿಂದೆ ಹೇಳಿದ್ದರು. ಪ್ರವಾಹದಿಂದಾಗಿ ಸಂಭವಿಸಿರುವ ಭೂಕುಸಿತದಲ್ಲಿ ಸುಮಾರು 300 ಮಂದಿ ಸಾವನ್ನಪ್ಪಿರಬಹುದು ಎಂಬುದಾಗಿ ಅಧಿಕಾರಿಗಳು ಹೇಳಿದ್ದಾರೆ.