ಬೀಜಿಂಗ್ , ಮಂಗಳವಾರ, 15 ಸೆಪ್ಟೆಂಬರ್ 2009( 20:23 IST )
ಭಾರತ ಮತ್ತು ಚೀನಾ ಗಡಿಭಾಗಗಳಲ್ಲಿ ಶಾಂತಿ ಸ್ಥಿರತೆ ಕದಡುತ್ತಿರುವ ಹಿನ್ನೆಲೆಯಲ್ಲಿ ುಭಯ ದೇಶಗಳು ಗಡಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಇದು ಸೂಕ್ತ ಸಮಯವಾಗಿದೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.
ಭಾರತ ಮತ್ತು ಚೀನಾದ ಗಡಿಭಾಗಗಳಲ್ಲಿ ಗುಂಡಿನ ಚಕಮಕಿ ನಡೆದಿದೆ ಎನ್ನುವ ವರದಿಗಳು ಅಪಕ್ವ ಹಾಗೂ ಆಧಾರರಹಿತವಾಗಿವೆ ಎಂದು ಚೀನಾ ತಳ್ಳಿಹಾಕಿದೆ.
ಚೀನಾ -ಭಾರತ ದೇಶಗಳ ಬಾಂಧವ್ಯ ಅಭಿವೃದ್ಧಿಯತ್ತ ಸಾಗುತ್ತಿದ್ದು, ಪರಸ್ಪರ ಸಹಕಾರದಲ್ಲಿ ಹೆಚ್ಚಳವಾಗುತ್ತಿದೆ. ಆದ್ದರಿಂದ ಪ್ರಸಕ್ತ ಸಮಯದಲ್ಲಿ ಉಭಯ ರಾಷ್ಟ್ರಗಳು ಗಡಿವಿವಾದವನ್ನು ಬಗೆಹರಿಸಿಕೊಳ್ಳುವುದು ಸೂಕ್ತವಾಗಿದೆ ಎಂದು ಹೇಳಿಕೆ ನೀಡಿದೆ.
ಉಭಯ ರಾಷ್ಟ್ರಗಳು ಉತ್ತಮ ವಾತಾವರಣ ಸೃಷ್ಟಿಸಲು ಶ್ರಮಿಸಬೇಕಾಗಿದೆ. ವಿವಾದಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ಬದಲು ಸಂಧಾನದ ಮೂಲಕ ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.