ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪೇಶಾವರ: ಪ್ರಬಲ ಬಾಂಬ್ ಸ್ಫೋಟಕ್ಕೆ ಕನಿಷ್ಠ 80 ಬಲಿ (Taliban | Peshawar | Pakistan | Hillary Clinton | explosion)
Feedback Print Bookmark and Share
 
ಪಾಕಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮತ್ತೆ ಮುಂದುವರಿದಿದ್ದು, ಬುಧವಾರ ಮಧ್ಯಾಹ್ನ ಪೇಶಾವರದ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದಲ್ಲಿ 80ಮಂದಿ ಬಲಿಯಾಗಿದ್ದಾರೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಇಸ್ಲಾಮಾಬಾದ್‌ಗೆ ಬಂದಿಳಿದ ಕೆಲವೇ ಗಂಟೆಗಳಲ್ಲಿ ಪೇಶಾವರ್ ನಗರದ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಉಗ್ರರು ಪ್ರಬಲ ಬಾಂಬ್ ಸ್ಫೋಟಿಸಿದ್ದಾರೆ. ಘಟನೆಯಲ್ಲಿ 80ಮಂದಿ ಸಾವಿಗೀಡಾಗಿದ್ದು, 100ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ಸ್ಫೋಟದ ಸದ್ದು ಎಷ್ಟು ತೀವ್ರವಾಗಿತ್ತೆಂದರೆ ಇಡೀ ನಗರಕ್ಕೆ ಇದರ ಶಬ್ದ ಕೇಳಿಸಿ ನಾಗರಿಕರನ್ನು ನಡುಗಿಸಿದೆ. ಇದರಿಂದ ಮಾರುಕಟ್ಟೆ ಪ್ರದೇಶದ ಕಟ್ಟಡಗಳಿಗೆ ತೀವ್ರ ಹಾನಿಯಾಗಿದೆ. ಕಟ್ಟಡವೊಂದಕ್ಕೆ ಸ್ಫೋಟದಿಂದ ಬೆಂಕಿ ತಗುಲಿದೆ. ಹಲವಾರು ಅಂಗಡಿಗಳು ಭಸ್ಮವಾಗಿದೆ. ಅಗ್ನಿಶಾಮಕ ಪಡೆಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

ಘಟನೆನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗಿರುವ ಸಾಧ್ಯತೆ ಇರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಾಂಬ್ ಸ್ಫೋಟದ ಹೊಣೆಯನ್ನು ಈವರೆಗೂ ಯಾವ ಉಗ್ರಗಾಮಿ ಸಂಘಟನೆಗಳು ಹೊತ್ತುಕೊಂಡಿಲ್ಲ.

ದಕ್ಷಿಣ ವಜೀರಿಸ್ತಾನದ ಬುಡಕಟ್ಟು ಪ್ರದೇಶದಲ್ಲಿ ಮಿಲಿಟರಿ ಪಡೆಗಳು ತಮ್ಮ ಕಾರ್ಯಾಚರಣೆಯನ್ನು ನಿಲ್ಲಿಸದಿದ್ದಲ್ಲಿ ಇನ್ನೂ ಹೆಚ್ಚಿನ ದಾಳಿಯನ್ನು ನಡೆಸುವುದಾಗಿ ತಾಲಿಬಾನ್ ಉಗ್ರರು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದರು.
ಸಂಬಂಧಿತ ಮಾಹಿತಿ ಹುಡುಕಿ