ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕಾಶ್ಮೀರ ವಿಷಯದಲ್ಲಿ ಮೂಗು ತೂರಿಸಲಾರೆ: ಅಮೆರಿಕ (America | Pakistan | India | Gilani | Kashmir)
Feedback Print Bookmark and Share
 
PTI
ಕಾಶ್ಮೀರ ಮತ್ತು ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಭಾರತ-ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ವಹಿಸುವಂತೆ ಕೇಳಿಕೊಂಡ ಪಾಕ್ ಕೋರಿಕೆಯನ್ನು ಅಮೆರಿಕ ತಳ್ಳಿಹಾಕಿದೆ. ಆದರೆ ಎರಡು ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆ ಆರಂಭಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದೆ.

ದಕ್ಷಿಣ ಏಷ್ಯಾದಲ್ಲಿ ಶಕ್ತಿ ಸಮತೋಲನ ಕಾಪಾಡಿಕೊಳ್ಳಲು ಭಾರತದ ಜತೆಗೆ ಮಾತುಕತೆ ಪುನರಾರಂಭಕ್ಕೆ ಸಹಕರಿಸುವಂತೆ ಪಾಕ್ ಪ್ರಧಾನಿ ಯೂಸೂಫ್ ರಾಜಾ ಗಿಲಾನಿ ಮಾಡಿಕೊಂಡ ಮನವಿಗೆ ಅಮೆರಿಕ ಈ ಪ್ರತಿಕ್ರಿಯೆ ಕೊಟ್ಟಿದೆ.

ಗುರುವಾರ ಇಲ್ಲಿ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರೊಂದಿಗಿನ ಮಾತುಕತೆ ವೇಳೆ ಗಿಲಾನಿ ಈ ಪ್ರಸ್ತಾಪವನ್ನು ಮುಂದಿಟ್ಟಿದ್ದರು. ಇದು ಕಷ್ಟದಾಯಕ ಪ್ರಕ್ರಿಯೆಯಾಗಿದ್ದು, ಭಾರತ ಮತ್ತು ಪಾಕ್ ನಡುವೆ ಶೀಘ್ರ ದ್ವಿಪಕ್ಷೀಯ ಮಾತುಕತೆ ಆರಂಭಕ್ಕೆ ಪ್ರಯತ್ನಿಸುವುದಾಗಿ ಹಿಲರಿ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ