ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಉಗ್ರರ ದಮನ: ಪಾಕ್‌ಗೆ ಅಮೆರಿಕ ಶಹಬ್ಬಾಸ್‌ಗಿರಿ (Pakistan | America | India | Obama | Terror)
Feedback Print Bookmark and Share
 
ಉಗ್ರರನ್ನು ಮಟ್ಟ ಹಾಕಲು ಪಾಕ್ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿರುವ ಅಮೆರಿಕ, ಆ ದೇಶದ ಮೇಲೆ ತನಗೆ ಕೆಲ ತಿಂಗಳ ಹಿಂದೆ ಇದ್ದುದಕ್ಕಿಂತಲೂ ಹೆಚ್ಚಿನ ನಂಬಿಕೆ ಈಗ ಬಂದಿದೆ ಎಂದು ಹೇಳಿದೆ.

ಪಾಕಿಸ್ತಾನದ ಗಡಿ ಪ್ರದೇಶಗಳಲ್ಲಿ ನೆಲೆಕಂಡುಕೊಂಡಿರುವ ಭಯೋತ್ಪಾದಕರನ್ನು ಮಟ್ಟ ಹಾಕಲು ಪಾಕಿಸ್ತಾನ ಇತ್ತೀಚಿನ ದಿನಗಳಲ್ಲಿ ತೋರುತ್ತಿರುವ ಬದ್ಧತೆಯನ್ನು ನಾವು ಗಮನಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಬಗೆಹರಿಸಲು ಅದು ಕೈಗೊಂಡಿರುವ ಕಠಿಣ ಕ್ರಮಗಳನ್ನು ನೀವೂ ನೋಡುತ್ತಿದ್ದೀರಿ’ ಎಂದು ಅಮೆರಿಕ ವಿದೇಶಾಂಗ ಇಲಾಖೆ ವಕ್ತಾರರಾದ ಇಯಾನ್ ಕೆಲ್ಲಿ ಸೋಮವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಾಣಿಜ್ಯನಗರಿಯಾಗಿರುವ ಮುಂಬೈ ಮೇಲೆ ನಡೆದಿರುವ ದಾಳಿ ಕುರಿತ ವಿಚಾರಣೆಗೆ ಸಂಬಂಧಿಸಿದಂತೆ ಹಾಗೂ ಉಗ್ರರ ಮೇಲಿನ ಕಠಿಣ ಕ್ರಮ ಕೈಗೊಳ್ಳುವಲ್ಲಿ ಪಾಕಿಸ್ತಾನ ಇಬ್ಬಗೆಯ ನೀತಿಯನ್ನು ಅನುಸರಿಸುತ್ತಿದೆ. ಏತನ್ಮಧ್ಯೆ ಅಮೆರಿಕ ಪಾಕಿಸ್ತಾನಕ್ಕೆ ಬೆಂಬಲವಾಗಿ ನಿಂತಿರುವುದು ಕೂಡ ಮತ್ತಷ್ಟು ಬಲ ಬಂದಂತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ