ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭದ್ರತಾ ಸಮಿತಿಯಲ್ಲಿ ಭಾರತಕ್ಕೆ ಸ್ಥಾನ ಕೊಡಿ: ಅಮೆರಿಕ ವಿದ್ವಾಂಸರು (America | India | China | Manmohan singh)
Feedback Print Bookmark and Share
 
ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಕಾಯಂ ಸ್ಥಾನಕ್ಕೆ ಆಗ್ರಹಿಸುತ್ತಿರುವ ಭಾರತಕ್ಕೆ ಅಮೆರಿಕ ಬೆಂಬಲಿಸಬೇಕು ಎಂದು ಅಮೆರಿಕದ ವಿದ್ವಾಂಸರು ಅಭಿಪ್ರಾಯಪಟ್ಟಿದ್ದಾರೆ.

ಇದೇ ವೇಳೆ ಅಮೆರಿಕಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಸ್ವಾಗತಿಸುವ ನಿರ್ಣಯವನ್ನು ಅಮೆರಿಕದ ಕಾಂಗ್ರೆಸ್ ಅಂಗೀಕರಿಸಿದೆ.

ಏತನ್ಮಧ್ಯೆ ಭಾರತ ಮತ್ತು ಪಾಕಿಸ್ತಾನ ಸಂಬಂಧ ಸುಧಾರಣೆಗೆ ಬೆಂಬಲ ನೀಡಲಾಗುವುದು ಎಂಬ ಅಮೆರಿಕ-ಚೀನಾ ಜಂಟಿ ಹೇಳಿಕೆಗೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಭಾರತದ ಆಕ್ರೋಶವನ್ನು ತಣ್ಣಗಾಗಿಸಲು ಮುಂದಾಗಿರುವ ಅಮೆರಿಕ ಚೀನಾದೊಂದಿಗೆ ಅಮೆರಿಕ ಆರೋಗ್ಯಕರ ಸಂಬಂಧ ಬಯಸುತ್ತದೆ ಎಂಬುದರ ಅರ್ಥ ಭಾರತವನ್ನು ಕಡೆಗಣಿಸುವುದಿಲ್ಲ ಎಂದು ಸಮಜಾಯಿಷಿ ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ