ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಒಬಾಮಾ, ಪ್ರಧಾನಿ ಮನಮೋಹನ್ ಸಿಂಗ್ ಚರ್ಚೆ (Barack Obama | Manmohan Singh | Afghanistan | climate change)
Bookmark and Share Feedback Print
 
ಅಫಘಾನಿಸ್ಥಾನ ಮತ್ತು ಹವಾಮಾನ ವೈಪರಿತ್ಯ ಕುರಿತಂತೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಪ್ರಧಾನಿ ಮನಮೋಹನ್ ಸಿಂಗ್ ಚರ್ಚೆ ನಡೆಸಿದ್ದು, ಅಫಘಾನಿಸ್ಥಾನದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತರಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು ಎಂದು ಪ್ರಧಾನ ಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.

ಉಭಯ ನಾಯಕರು ಮುಂಬರುವ ದಿನಗಳಲ್ಲಿ ಕೂಪನ್‌ಹಗೇನ್‌ನಲ್ಲಿ ನಡೆಯಲಿರುವ ಹವಮಾನ ಬದಲಾವಣೆ ಶೃಂಗಸಭೆಯ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಕೂಪನ್‌ಹಗೇನ್‌ನಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ತೆಗೆದುಕೊಳ್ಳುವ ಸಂಧಾನಾತ್ಮಕ ನಿಲುವುಗಳಿಗೆ ಭಾರತ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಲಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಒಬಾಮಾ ಅವರಿಗೆ ಹೇಳಿರುವುದಾಗಿ ಪ್ರಧಾನಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಅಫಘಾನಿಸ್ಥಾನದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತರಲು ವಿಶ್ವದ ಪ್ರಮುಖ ರಾಷ್ಟ್ರಗಳ ಪಾತ್ರ ಅಗತ್ಯವಾಗಿದೆ ಎಂದು ಪ್ರಧಾನಿ ಸಿಂಗ್ ಒಬಾಮಾ ಅವರಿಗೆ ಸ್ಪಷ್ಟಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ