ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಒಸಾಮಾ ಸುಳಿವು ನೀಡಿದಲ್ಲಿ ಕಾರ್ಯಾಚರಣೆ:ಗಿಲಾನಿ (Osama | Gilani | Pakistan)
Bookmark and Share Feedback Print
 
ಜಾಗತಿಕ ಭಯೋತ್ಪಾದಕ ಸಂಘಟನೆಯಾದ ಅಲ್‌ಕೈದಾ ಮುಖ್ಯಸ್ಥ ಒಸಾಮಾ ಬಿನ್ ಲಾಡೆನ್ ಪಾಕಿಸ್ತಾನದಲ್ಲಿದ್ದಾನೆ ಎನ್ನುವ ವರದಿಗಳನ್ನು ತಳ್ಳಿಹಾಕಿದ ಪ್ರಧಾನಿ ಯುಸೂಫ್ ರಾಜಾ ಗಿಲಾನಿ,ಒಸಾಮಾ ಅಡಗುತಾಣದ ಬಗ್ಗೆ ಅಮೆರಿಕ ಹಾಗೂ ಬ್ರಿಟನ್ ರಾಷ್ಟ್ರಗಳ ಗುಪ್ತಚರ ದಳಗಳು ಮಾಹಿತಿ ನೀಡಿದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇಲ್ಲಿಯವರೆಗೆ ಅಮೆರಿಕ ಮತ್ತು ಬ್ರಿಟನ್ ರಾಷ್ಟ್ರಗಳು ಒಸಾಮಾ ಬಿನ್ ಲಾಡೆನ್ ಅಡಗುತಾಣದ ಬಗ್ಗೆ ಮಾಹಿತಿ ನೀಡಿಲ್ಲವೆಂದು ಗಿಲಾನಿ, ಅಧಿಕೃತವಾಗಿ ಜರ್ಮನಿ ಮತ್ತು ಬ್ರಿಟನ್ ರಾಷ್ಟ್ರಗಳ ಪ್ರವಾಸದಲ್ಲಿ ತಮ್ಮೊಂದಿಗಿರುವ ಸುದ್ದಿಗಾರರಿಗೆ ತಿಳಿಸಿದ್ದಾರೆ.

ರಾಷ್ಟ್ರಾಧ್ಯಕ್ಷ ಆಸಿಫ್ ಅಲಿ ಜರ್ದಾರಿಯವರೊಂದಿಗೆ ಭಿನ್ನಾಭಿಪ್ರಾಯಗಳಿವೆ ಎನ್ನುವ ವರದಿಗಳನ್ನು ತಳ್ಳಿಹಾಕಿದ ಪ್ರಧಾನಿ ಗಿಲಾನಿ, ಪಾಕಿಸ್ತಾನಕ್ಕೆ ಪ್ರಜಾಪ್ರಭುತ್ವ ಅಗತ್ಯವಾಗಿದೆ. ಒಂದು ವೇಳೆ ಪ್ರಜಾಪ್ರಭುತ್ವಕ್ಕೆ ಅವಕಾಶ ನೀಡದಿದ್ದಲ್ಲಿ ದೇಶಕ್ಕೆ ಮಾರಕವಾಗಲಿದೆ ಎಂದು ಭವಿಷ್ಯ ನುಡಿದರು.

ಸಮಾಜದ ಅಂಗಗಳಾದ ಮಾಧ್ಯಮ ,ನ್ಯಾಯಾಂಗ ಮತ್ತು ಸೇನೆ ಪ್ರಬಲವಾಗಿದ್ದು, ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸಲು ಪ್ರಜಾಪ್ರಭುತ್ವ ಅಗತ್ಯವಾಗಿದೆ ಎಂದು ಪ್ರಧಾನಿ ಗಿಲಾನಿ ಅಭಿಪ್ರಾಯಪಟ್ಟರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಒಸಾಮಾ, ಗಿಲಾನಿ, ಪಾಕಿಸ್ತಾನ