ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪ್ರಿಯಾಂಕಾ:ಭಾರತೀಯ ಅಮೆರಿಕನ್ ಸುಂದರಿ (Beauty Pageant | Miss Indian American)
Bookmark and Share Feedback Print
 
ಭಾರತೀಯ ಮೂಲದ ಕ್ಯಾಲಿಫೋರ್ನಿಯಾ ನಿವಾಸಿ ಪ್ರಿಯಾಂಕಾ ಸಿಂಘಾ ಅವರಿಗೆ 28ನೇ ಭಾರತೀಯ ಅಮೆರಿಕನ್ ಸುಂದರಿ ಪಟ್ಟ ಒಲಿದಿದೆ.

ಕಳೆದ ನವೆಂಬರ್ 21ರಂದು ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪ್ರಿಯಾಂಕಾ ಅಮೆರಿಕದ 25 ನಗರಗಳ ಸ್ಪರ್ಧೆಯಲ್ಲಿ ಭಾಗವಹಿಸಿದ ಸುಂದರಿಯರನ್ನು ಮೀರಿಸಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ಕಳೆದ ತಿಂಗಳ ಕೊನೆಯ ವಾರದಲ್ಲಿ ನಡೆದ ಸ್ಪರ್ಧೆಯಲ್ಲಿ ವಿಜೇತ ಪ್ರಿಯಾಂಕಾಗೆ ಬಾಲಿವುಡ್ ನಟಿ ನೇಹಾ ಧೂಪಿಯಾ ಕಿರೀಟ ತೊಡಿಸಿ ಸನ್ಮಾನಿಸಿದರು.

ಪ್ರಿಯಾಂಕಾ ದಕ್ಷಿಣ ಆಫ್ರಿಕಾದ ಡರ್ಬನ್‌ನಲ್ಲಿ 2010,ಮಾರ್ಚ್ 27 ರಂದು ನಡೆಯಲಿರುವ ವಿಶ್ವಸುಂದರಿ ಸ್ಪರ್ಧೆಯಲ್ಲಿ ಅಮೆರಿಕವನ್ನು ಪ್ರತಿನಿಧಿಸುತ್ತಿದ್ದಾರೆ.

ಕ್ಯಾಲಿಫೋರ್ನಿಯಾದ ತಾಂಪಾ ನಿವಾಸಿ ಹಾಗೂ ದಕ್ಷಿಣ ಫ್ರೋರಿಡಾ ವಿಶ್ವಿದ್ಯಾಲಯದ ವಿದ್ಯಾರ್ಥಿನಿಯಾದ ಶುವಾಲಿ ವ್ಯಾಸ್ ರನ್ನರ್-ಅಪ್ ಸ್ಥಾನವನ್ನು ಗಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ