ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಭಾರತ-ಪಾಕಿಸ್ತಾನ ಸಂಬಂಧ ಜಟಿಲ: ಅಮೆರಿಕ (India | Pakistan | critical | Mike Mullen | US)
Bookmark and Share Feedback Print
 
ಭಾರತ ಬಲಿಷ್ಠ ರಾಷ್ಟ್ರವಾಗಿದ್ದರೂ ಪ್ರಾದೇಶಿಕ ಅಸ್ಥಿರತೆಗೆ ಭಾರತ ಮತ್ತು ಪಾಕಿಸ್ತಾನದ ಹದಗೆಟ್ಟಿರುವ ಸಂಬಂಧಗಳು ಕಾರಣವಾಗಿವೆ ಎಂದು ಅಮೆರಿಕದ ಉನ್ನತ ಸೇನಾ ಕಮಾಂಡರ್ ಹೇಳಿದ್ದಾರೆ.

ಏಷ್ಯಾ ವಲಯದಲ್ಲಿ ಭಾರತ ಪ್ರಬಲ ರಾಷ್ಟ್ರವಾಗಿದೆ ಎಂದು ಅಮೆರಿಕ ಸೇನಾಪಡೆಗಳ ಜಂಟಿ ಮುಖ್ಯಸ್ಥ ಅಡ್ಮಿರಲ್ ಮೈಕ್ ಮುಲ್ಲೆನ್ ಅಫಘಾನಿಸ್ತಾನದಲ್ಲಿ ವಿದೇಶಾಂಗ ವ್ಯವಹಾರಗಳ ಸಂಸದೀಯ ಸಮಿತಿ ಆಯೋಜಿಸಿದ ಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಶ್ವದ ಪ್ರಮುಖ ರಾಷ್ಟ್ರಗಳು ಸ್ಥಿರತೆಯನ್ನು ಕಾಪಾಡಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಜಟಿಲವಾಗಿದೆ ಎಂದು ಹೇಳಿದ್ದಾರೆ.

ಒಂದು ವೇಳೆ ಉಭಯ ದೇಶಗಳ ನಡುವೆ ಶಾಂತಿ ಒಪ್ಪಂದ ಏರ್ಪಟ್ಟಲ್ಲಿ ಖಂಡದಲ್ಲಿ ಶಾಂತಿ ನೆಲೆಸುವ ಸಾಧ್ಯತೆಗಳಿವೆ ಎಂದು ಅಮೆರಿಕದ ಸೇನಾ ಕಮಾಂಡರ್ ಮೈಕ್ ಮುಲ್ಲೆನ್ ಅಭಿಪ್ರಾಯಪಟ್ಟಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ