ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಲೂಚಿಸ್ತಾನದ ಉಗ್ರರಿಗೆ ಬೆಂಬಲ ನೀಡುತ್ತಿಲ್ಲ:ಕೃಷ್ಣ (Balochistan | India | SM Krishna)
Bookmark and Share Feedback Print
 
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಭಾರತ ಅನಧಿಕೃತವಾಗಿ ಹಸ್ತಕ್ಷೇಪ ನಡೆಸಿ ಉಗ್ರರನ್ನು ಬೆಂಬಲಿಸುತ್ತಿದೆ ಎನ್ನುವ ಪಾಕ್ ಆರೋಪಗಳನ್ನು ತಳ್ಳಿಹಾಕಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಎಂ.ಕೃಷ್ಣ, ಬಲೂಚಿಸ್ತಾನದಲ್ಲಿ ಭಾರತದ ಪಾತ್ರ ತೆರೆದ ಪುಸ್ತಕದಂತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಲೂಚಿಸ್ತಾನದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತ್ಯೇಕತಾವಾದಿಗಳಿಗೆ ಭಾರತ ನೀಡುತ್ತಿರುವ ಬೆಂಬಲಗಳ ಬಗ್ಗೆ ಸಾಕ್ಷಾಧಾರವಿದೆ ಎಂದು ಪಾಕಿಸ್ತಾನದ ಆರೋಪಗಳಿಗೆ ಉತ್ತರಿಸಿದ ಸಚಿವ ಕೃಷ್ಣ ಪಾಕಿಸ್ತಾನದಲ್ಲಿ ಭಾರತದ ವಿರುದ್ಧ ಯಾವುದೇ ಸಾಕ್ಷಾಧಾರಗಳಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಸಚಿವರ ಎರಡೂ ಹೇಳಿಕೆಗಳನ್ನು ನೋಡಿದಾಗ(ಬಲೂಚಿಸ್ತಾನದಲ್ಲಿ ಉಗ್ರರಿಗೆ ಬೆಂಬಲ ನೀಡುತ್ತಿರುವ ಬಗ್ಗೆ) ಪಾಕಿಸ್ತಾನದಲ್ಲಿ ಭಾರತದ ವಿರುದ್ಧ ಯಾವುದೇ ಸಾಕ್ಷಗಳು ಇಲ್ಲವೆನ್ನುವುದು ಸಾಬೀತಾಗುತ್ತದೆ ಎಂದು ಸಚಿವ ಕೃಷ್ಣ ರಾಜ್ಯಸಭೆಗೆ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಮನಮೋಹನ್ ಸಿಂಗ್, ನೆರೆಯ ರಾಷ್ಟ್ರಗಳೊಂದಿಗೆ ಪಾಕಿಸ್ತಾನದ ಸ್ಥಿರತೆ ಮತ್ತು ಅಭಿವೃದ್ಧಿಯನ್ನು ಬಯಸುವುದು ಭಾರತದ ಬಯಕೆಯಾಗಿದೆ ಎಂದು ಹೇಳಿದ್ದಾರೆ. ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಕೃಷ್ಣ ಹೇಳಿದ್ದಾರೆ.

ಭಾರತ ಬಲೂಚಿಸ್ತಾನದ ಉಗ್ರರಿಗೆ ಬೆಂಬಲ ನೀಡುತ್ತಿದೆ ಎಂದು ಹಲವಾರು ಬಾರಿ ಆರೋಪಿಸಿದೆ. ಆದರೆ ಪ್ರತಿಬಾರಿಯು ಭಾರತ ಅದನ್ನು ತಳ್ಳಿಹಾಕುತ್ತಾ ಬಂದಿದೆ.
ಸಂಬಂಧಿತ ಮಾಹಿತಿ ಹುಡುಕಿ