ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸೊಮಾಲಿಯಾ: ಆತ್ಮಾಹುತಿ ದಾಳಿಗೆ 18 ಮಂದಿ ಬಲಿ (Sucide attack | Blast | Somalia | Mogadishu)
Bookmark and Share Feedback Print
 
ಸೊಮಾಲಿಯಾದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದ ಸಮಾರಂಭಕ್ಕೆ ಅತಿಥಿ ರೂಪದಲ್ಲಿ ಬಂದಿದ್ದ ಆತ್ಮಹತ್ಯಾ ದಾಳಿಕೋರ ತನ್ನನ್ನು ತಾನು ಸ್ಫೋಟಿಸಿಕೊಂಡಾಗ ಇಲ್ಲಿನ ಸರ್ಕಾರದ ಮೂವರು ಸಚಿವರು ಸೇರಿದಂತೆ 18 ಮಂದಿ ಸಾವನ್ನಪ್ಪಿದರು. ಹಲವು ಮಂದಿ ಗಾಯಗೊಂಡಿದ್ದಾರೆ.

ಸತ್ತವರಲ್ಲಿ ಬಹುಪಾಲು ಮಂದಿ ವಿದ್ಯಾರ್ಥಿಗಳಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ ಇಬ್ಬರು ಪತ್ರಕರ್ತರೂ ದುರಂತದಲ್ಲಿ ಬಲಿಯಾಗಿದ್ದಾರೆ.

ಸಮಾರಂಭದಲ್ಲಿ ಸುಮಾರು ನೂರು ಮಂದಿ ಇದ್ದರೆಂದು ಹೇಳಲಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಭೀತಿ ಇದೆ.

ಆತ್ಮಾಹುತಿ ದಾಳಿ ನಡೆದ ಪ್ರದೇಶದಲ್ಲಿ ಉದ್ವಿಗ್ನ ಹಾಗೂ ಆತಂಕ ನೆಲೆಸಿದ್ದು, ಹೆಚ್ಚುವರಿ ಸೇನಾಪಡೆಗಳನ್ನು ರವಾನಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ